ಈಗಿನ ಸುದ್ದಿ

ಮನಾಲಿ ದುರಂತ: ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆ ಸ್ಥಗಿತ

ಮನಾಲಿ ದುರಂತ: ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆ ಸ್ಥಗಿತ
Published On :

ಮಂಡಿ(ಹಿಮಾಚಲಪ್ರದೇಶ): ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಹಿಳೆಯಿಂದಾಗಿ ಕಳೆದ ಭಾನುವಾರ ಪ್ರವಾಹದಲ್ಲಿ ಕೊಚ್ಚಿಹೋದ 24 ವಿದ್ಯಾರ್ಥಿಗಳ ರಕ್ಷಣಾ ಕಾರ್ಯಾಚರಣೆ ಬುಧವಾರ ಸ್ಧಗಿತಗೊಂಡಿದೆ.

ಹಿಮಾಚಲಪ್ರದೇಶದ ಮಂಡಿಯಲ್ಲಿನ ಸುತ್ತಮುತ್ತಲು ಧಾರಾಕಾರ ಮಳೆಯಾಗುತ್ತಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಹೈದರಾಬಾದ್‌ನ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ಎರಡನೇ ವರ್ಷದ ಎಲೆಕ್ಟ್ರಾನಿಕ್ಸ್ ಶಿಕ್ಷಣ ಪಡೆಯುತ್ತಿರುವ 48 ವಿದ್ಯಾರ್ಥಿಗಳನ್ನು ಒಳಗೊಂಡ ತಂಡ ಹಿಮಾಚಲ ಪ್ರದೇಶದಕ್ಕೆ ಪ್ರವಾಸಕ್ಕೆ ಹೋಗಿದ್ದರು.

ಭಾನುವಾರ ಬಿಯಾಸ್ ನದಿ ದಡದ ಮೇಲೆ ನಿಂತು ಈ ಎಲ್ಲರೂ ಫೋಟೋ ತೆಗೆಸಿಕೊಳ್ಳುತ್ತಿದ್ದರು. ಅದೇ ವೇಳೆಗೆ ಲಾರ್ಜಿ ಜಲವಿದ್ಯುತ್ ಸ್ಥಾವರದಿಂದ ಭಾರಿ ಪ್ರಮಾಣದ ನೀರು ಹೊರಬಿಡಲಾಯಿತು. ಇದರಿಂದ ದಿಢೀರ್ ಪ್ರವಾಸ ಸೃಷ್ಟಿಯಾಗಿ 24 ವಿದ್ಯಾರ್ಥಿಗಳು ಹಾಗೂ ಪ್ರಹ್ಲಾದ್ ಎಂಬ ಪ್ರವಾಸಿ ಮಾರ್ಗದರ್ಶಿ ಕ್ಷಣಾರ್ಧದಲ್ಲಿ ಕೊಚ್ಚಿ ಹೋಗಿದ್ದು, ಉಳಿದ 24 ವಿದ್ಯಾರ್ಥಿಗಳು ಕೂದಲೆಳೆಯಲ್ಲಿ ಪಾರಾಗಿದ್ದರು.

ಕಳೆದ ಸೋಮವಾರದಿಂದ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿತ್ತು. ಸುಮಾರು 633 ರಕ್ಷಣಾ ಸಿಬ್ಬಂದಿ ಇಂದು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಮಳೆ ಸುರಿಯುತ್ತಿದ್ದು, ಕಾರ್ಯಾಚರಣೆಗೆ ಅಡ್ಡಿಯಾಗಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.