ಈಗಿನ ಸುದ್ದಿ

1984 ಗಲಭೆ ಪ್ರಕರಣ: ಸೋನಿಯಾ ವಿರುದ್ಧದ ಅರ್ಜಿ ವಜಾಗೊಳಿಸಿದ ಅಮೆರಿಕ

1984 ಗಲಭೆ ಪ್ರಕರಣ: ಸೋನಿಯಾ ವಿರುದ್ಧದ ಅರ್ಜಿ ವಜಾಗೊಳಿಸಿದ ಅಮೆರಿಕ
Published On :

ನ್ಯೂಯಾರ್ಕ್: 1984ರಲ್ಲಿ ನಡೆದ ಸಿಖ್ ಹಿಂಸಾಚಾರ ಪ್ರಕರಣ ಸಂಬಂಧ ಸೋನಿಯಾ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಮೆರಿಕ ನ್ಯಾಯಾಲಯ ಬುಧವಾರ ವಜಾಗೊಳಿಸಿದೆ.

1984ರ ಸಿಖ್ ವಿರೋಧಿ ಹಿಂಸಾಚಾರದಲ್ಲಿ ಭಾಗಿಯಾಗಿರುವ ಕಾಂಗ್ರೆಸ್ ಪಕ್ಷದ ನಾಯಕರನ್ನು ಸೋನಿಯಾ ಗಾಂಧಿ ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿ 'ನ್ಯಾಯಾಕ್ಕಾಗಿ ಸಿಕ್ಕರು ಸಂಘಟನೆ' ಅಮೆರಿಕದ ನ್ಯಾಯಾಲದಲ್ಲಿ ದಾವೆ ಹೂಡಿತ್ತು.

ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಬ್ರೂಕ್ಲಿನ್ನಲ್ಲಿರುವ ಅಮೆರಿಕ ಫೆಡರೆಲ್ ನ್ಯಾಯಾಲಯ ಸೋನಿಯಾ ವಿರುದ್ಧದ ಅರ್ಜಿಯನ್ನು ವಜಾಗೊಳಿಸಿದೆ.

ಸಿಖ್ ಸಂಘಟನೆ ತಮ್ಮ ವಿರುದ್ಧ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಿ ಎಂದು ಕೋರಿ ಸೋನಿಯಾ ಗಾಂಧಿ ಅಮೆರಿಕದ ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು. ಸಿಖ್ ಸಂಘಟನೆ ಹೂಡಿರುವ ದಾವೆ ಅಮೆರಿಕ ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ, ಹಾಗಾಗಿ ಅರ್ಜಿ ವಜಾಗೊಳಿಸಿ ಎಂದು ಕೋರಿದ್ದರು.

ವಿಚಾರಣೆ ನಡೆಸಿದ ಅಮೆರಿಕದ ನ್ಯಾಯಾಲಯ ಸಿಖ್ ಸಂಘಟನೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.