ಈಗಿನ ಸುದ್ದಿ

ಕಾಫಿಶಾಪ್‌ ಪ್ರಕರಣ: ನಾಳೆ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆ

ಕಾಫಿಶಾಪ್‌ ಪ್ರಕರಣ: ನಾಳೆ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆ
Published On :

ಬೆಂಗಳೂರು: ಕಾಫಿಶಾಪ್‌ನಲ್ಲಿ ಯುವತಿ ಫೋಟೋ ಕ್ಲಿಕ್ಕಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ನಾಳೆ ರಾಜ್ಯ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಲಿದ್ದಾರೆ.

ನಾಳೆ ಸರ್ಕಾರಕ್ಕೆ 58 ಪುಟಗಳ ಮಧ್ಯಂತರ ವರದಿಯನ್ನು ಸಿಐಡಿ ಅಧಿಕಾರಿಗಳು ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಫಿಶಾಫ್‌ನಲ್ಲಿ ಎಡಿಜಿಪಿ ಡಾ.ಪಿ ರವೀಂದ್ರನಾಥ್ ನನ್ನ ಫೋಟೋ ಕ್ಲಿಕ್ಕಿಸಿದ್ದಾರೆಂದು ಯುವತಿ ದೂರು ನೀಡಿದ್ದಳು. ದೂರಿನ ಆಧಾರದ ಮೇರೆಗೆ ರವೀಂದ್ರನಾಥ್ ಅವರನ್ನು ವಿಚಾರಣೆಗೆ ಒಳಪಡಿಸಿದ ಪೊಲೀಸರು, ರವೀಂದ್ರನಾಥ್ ಮೊಬೈಲ್‌ನ್ನು ವಶಕ್ಕೆ ತೆಗೆದುಕೊಂಡಿದ್ದರು.

ಮೊಬೈಲ್‌ನಲ್ಲಿ ದೂರುದಾರ ಯುವತಿಯ ಫೋಟೋ ಪತ್ತೆಯಾಗಿದ್ದು, ಅಸಹ್ಯಕರ ಭಂಗಿಯ 2 ಫೋಟೋ ಪತ್ತೆಯಾಗಿದೆ. ಆದರೆ ಈ ಆರೋಪವನ್ನು ರವೀಂದ್ರನಾಥ್ ನಿರಾಕರಿಸಿದ್ದಾರೆ.

ಈ ಹಿನ್ನಲೆಯಲ್ಲಿ ಯಾರು ಫೋಟೋ ತೆಗೆದಿದ್ದಾರೆಂದು ಸಿಐಡಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದು, ಫೋರೆನ್ಸಿಕ್ ಲ್ಯಾಬ್‌ಗೆ ರವೀಂದ್ರನಾಥ್ ಮೊಬೈಲ್ ರವಾನೆ ಮಾಡಿದ್ದಾರೆ.

ಪ್ರಕರಣದಲ್ಲಿ ವ್ಯವಸ್ಥಿತ ಪಿತೂರಿ ನಡೆದಿದೆ ಎಂದು ಆರೋಪ ಮಾಡಿದ್ದ ರವೀಂದ್ರನಾಥ್, ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ವಿರುದ್ಧ ಜಾತಿನಿಂದನೆ ಪ್ರಕರಣ ದಾಖಲಿಸಿದ್ದರು.

ಈ ಸಂಬಂಧ ತನಿಖೆ ನಡೆಸಿರುವ ಸಿಐಡಿ, ರಾಘವೇಂದ್ರ ಔರಾದ್ಕರ್ ಅವರು ಡಾ.ರವೀಂದ್ರನಾಥ್‌ರನ್ನು ಅಸ್ಪೃಶ್ಯರಂತೆ ನಡೆಸಿಕೊಂಡಿಲ್ಲ ಎಂದು ಹೇಳಿದೆ.

ಸಿಐಡಿ ವರದಿಯಲ್ಲಿ ಜಾತಿ ನಿಂದನೆ ಪ್ರಕರಣ ಸಂಬಂಧ ಆಯುಕ್ತ ಔರಾದ್ಕರ್‌ಗೆ ಕ್ಲೀನ್‌ಚಿಟ್ ನೀಡಲಾಗಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.