ವಿಧಾನಪರಿಷತ್ಗೆ 7, ರಾಜ್ಯಸಭೆಗೆ 4 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಗೆ ನಾಲ್ವರು ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಿಜೆಪಿಯಿಂದ ಪ್ರಭಾಕರ್ ಕೋರೆ, ಕಾಂಗ್ರೆಸ್ನ ಬಿ.ಕೆ ಹರಿಪ್ರಸಾದ್, ಪ್ರೋ.ರಾಜೀವ್ಗೌಡ, ಜೆಡಿಎಸ್ನಿಂದ ಕುಪ್ಪೇಂದ್ರ ರೆಡ್ಡಿ ಆಯ್ಕೆಯಾಗಿದ್ದಾರೆ.
ವಿಧಾನಪರಿಷತ್ ಚುನಾವಣೆ
ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ವಿಧಾನಸಭೆ ಕಾರ್ಯದರ್ಶಿ ಓಂ ಪ್ರಕಾಶ್ ಅವರು ಅಧಿಕೃತ ಘೋಷಣೆ ಹೊರಡಿಸಿದ್ದು, 7 ಸದಸ್ಯರಿಗೆ ಪ್ರಮಾಣ ಪತ್ರ ನೀಡಿದ್ದಾರೆ.
ವಿಧಾನಪರಿಷತ್ ಚುನಾವಣೆಗೆ ಸ್ಪಧಿಸಿದ್ದ 7 ಅಭ್ಯರ್ಥಿಗಳಲ್ಲಿ, ಕಾಂಗ್ರೆಸ್ನಿಂದ 4, ಬಿಜೆಪಿಯಿಂದ 1, ಜೆಡಿಎಸ್ನಿಂದ 1, ಓರ್ವ ಸ್ವತಂತ್ರ ಅಭ್ಯರ್ಥಿ ಸ್ಪರ್ಧಿಸಿದ್ದರು.
ಈ ಏಳು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಯಿಂದ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ, ಜೆಡಿಎಸ್ನಿಂದ ಟಿ.ಎ ಸರವಣ, ಸ್ವತಂತ್ರ ಅಭ್ಯರ್ಥಿ ಡಿ.ಯು ಮಲ್ಲಿಕಾರ್ಜನ್, ಕಾಂಗ್ರೆಸ್ನಿಂದ ಡಾ.ಜಿ ಪರಮೇಶ್ವರ್, ಹೆಚ್.ಎಂ ರೇವಣ್ಣ, ಜಯಮ್ಮ ಬಾಲರಾಜ್, ಬೋಸರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


