ಈಗಿನ ಸುದ್ದಿ

ಬದೌನ್ ಗ್ಯಾಂಗ್‌ರೇಪ್ ಪ್ರಕರಣ: ಎಫ್‌ಐಆರ್ ದಾಖಲಿಸಿದ ಸಿಬಿಐ

ಬದೌನ್ ಗ್ಯಾಂಗ್‌ರೇಪ್ ಪ್ರಕರಣ: ಎಫ್‌ಐಆರ್ ದಾಖಲಿಸಿದ ಸಿಬಿಐ
Published On :

ಲಖನೌ: ಬದೌನ್ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ತನಿಖೆ ಕೈಗೊಂಡಿರುವ ಸಿಬಿಐ, ಗುರುವಾರ ಎಫ್‌ಐಆರ್ ದಾಖಲಿಸಿದೆ.

ಉತ್ತರ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ, ಕೇಂದ್ರ ಸರ್ಕಾರ ಬದೌನ್ ಗ್ಯಾಂಗ್‌ರೇಪ್ ಪ್ರಕರಣದ ತನಿಖೆ ನಡೆಸಲು ಸಿಬಿಐ ನೇಮಕ ಮಾಡಿತ್ತು.

ತನಿಖೆ ಕೈಗೊಂಡಿರುವ ಸಿಬಿಐ, ಇಂದು ಎಫ್‌ಐಆರ್ ದಾಖಲಿಸಿದೆ. ಪ್ರಕರಣ ಸಂಬಂಧ ಡಿಐಜಿ ನೀರಜ್ ಕುಮಾರ್ ಸೇರಿದಂತೆ 19 ಅಧಿಕಾರಿಗಳನ್ನೊಳಗೊಂಡ ಸಿಬಿಐ ತಂಡ ನಾಳೆ ಬದೌನ್ ಜಿಲ್ಲೆಗೆ ಆಗಮಿಸಲಿದ್ದು, ವಿಚಾರಣೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

14 ಮತ್ತು 15 ವಯಸ್ಸಿನ ಇಬ್ಬರು ಸಹೋದರಿಯರು ಮೇ 27ರಂದು ಕಾಣೆಯಾಗಿದ್ದರು. ಮಾರನೇ ದಿನ ಬೆಳಗ್ಗೆ ಮಾವಿನ ಮರವೊಂದರಲ್ಲಿ ಇವರಿಬ್ಬರ ಮೃತದೇಹವು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಸಹೋದರಿಯರ ಮೇಲೆ 7 ಮಂದಿ ರಾಕ್ಷಸರು ಸಾಮೂಹಿಕ ಅತ್ಯಾಚಾರ ನಡೆಸಿ, ನಂತರ ಮರಕ್ಕೆ ನೇತುಹಾಕಿದ್ದ ವಿಚಾರ ಮರಣೋತ್ತರ ವರದಿಯಿಂದ ಬಹಿರಂಗವಾಗಿತ್ತು. ಈ ಪ್ರಕರಣ ದೇಶಾದ್ಯಂತ ಭಾರಿ ಆಕ್ರೋಶ, ಚರ್ಚೆಗೆ ಕಾರಣವಾಗಿತ್ತು.

ಪ್ರಕರಣದಲ್ಲಿ ಏಳು ಮಂದಿ ಆರೋಪಿಗಳಿದ್ದು, ಇದರಲ್ಲಿ 5 ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ. ಅದರಲ್ಲಿ ಸರ್ವೇಶ್ ಯಾದವ್ ಮತ್ತು ಛತ್ರಪಾಲ್ ಯಾದವ್ ಎಂಬ ಇಬ್ಬರು ಪೊಲೀಸ್ ಪೇದೆಗಳು ಸೇರಿದಂತೆ ಪಪ್ಪು, ಅವ್‌ದೇಶ್ ಯಾದವ್, ಉರ್ವೇಶಅ ಯಾದವ್‌ರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗಿತ್ತು.

ಬಂಧಿತ ಆರೋಪಿಗಳನ್ನು ನಾಳೆ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.