ಈಗಿನ ಸುದ್ದಿ

ಮುಷರಫ್ ವಿದೇಶ ಪ್ರಯಾಣಕ್ಕೆ ಅನುಮತಿ ನೀಡಿದ ಪಾಕ್ ಕೋರ್ಟ್

ಮುಷರಫ್ ವಿದೇಶ ಪ್ರಯಾಣಕ್ಕೆ ಅನುಮತಿ ನೀಡಿದ ಪಾಕ್ ಕೋರ್ಟ್
Published On :

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ವಿದೇಶ ಪ್ರಯಾಣಕ್ಕೆ ಪಾಕಿಸ್ತಾನದ ಸಿಂಧ್ ಹೈಕೋರ್ಟ್ ಗುರುವಾರ ಅನುಮತಿ ನೀಡಿದೆ.

ದೇಶದ್ರೋಹ ಸೇರಿದಂತೆ ಐದಾರು ಪ್ರಕರಣಗಳನ್ನು ಎದುರಿಸುತ್ತಿರುವ ಮುಷರಫ್ ಅವರಿಗೆ ವಿದೇಶ ಪ್ರಯಾಣಕ್ಕೆ ನಿಷೇಧ ಹೇರಲಾಗಿತ್ತು.

ಈ ಸಂಬಂಧ ಮುಷರಫ್ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ತಮ್ಮ ತಾಯಿ ವಿದೇಶದಲ್ಲಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರನ್ನು ಭೇಟಿಮಾಡಲು ವಿದೇಶ ಪ್ರಯಾಣಕ್ಕೆ ಅನುಮತಿ ನೀಡಿ ಎಂದು ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು.

ಅರ್ಜಿ ವಿಚಾರಣೆ ನಡೆಸಿದ ಇಬ್ಬರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಾಪೀಠ ಮುಷರಫ್ ವಿದೇಶಕ್ಕೆ ಪ್ರಯಾಣಕ್ಕೆ ಅನುಮತಿ ನೀಡಿದೆ.

ವಿದೇಶ ಪ್ರಯಾಣ ನಿಷೇಧ ಪಟ್ಟಿಯಿಂದ ಮುಷರಫ್ ಹೆಸರು ತೆಗೆದು ಹಾಕುವಂತೆ ನ್ಯಾಯಾಪೀಠ ಸಂಬಂಧಪಟ್ಟ ಇಲಾಖೆಗೆ ಸೂಚಿಸಿದೆ.
1999ರಿಂದ 2008ರವರೆಗೆ ಪಾಕಿಸ್ತಾನದ ಸೇನಾಪಡೆಯ ಅಧ್ಯಕ್ಷ ಮತ್ತು ಪಾಕಿಸ್ತಾನದ ಅಧ್ಯಕ್ಷರಾಗಿದ್ದ ಮುಷರಫ್ ಅವರು, 2007ರಲ್ಲಿ ಪಾಕಿಸ್ತಾನದಲ್ಲಿ ನಡೆದ ರಾಜಕೀಯ ಬಿಕ್ಕಟ್ಟಿನಿಂದಾಗಿ ಆಂತರಿಕ ತುರ್ತುಪರಿಸ್ಥಿತಿ ಹೇರಿದ್ದರು. ಮುಷರಫ್ ಅವರ ದುರಾಡಳಿತದ ವಿರುದ್ಧ ತಿರುಗಿಬಿದಿದ್ದ ಪ್ರತಿಪಕ್ಷಗಳನ್ನು ಮಣಿಸಲು ಮತ್ತು ತಮ್ಮ ಅಧಿಕಾರವನ್ನು ಉಳಿಸಿಕೊಳ್ಳಲು ಮುಷರಫ್ ಪಾಕಿಸ್ತಾನದಲ್ಲಿ ಆಂತರಿಕ ತುರ್ತುಪರಿಸ್ಥಿತಿ ಹೇರಿದ್ದರು. ಇದರಿಂದ ಪಾಕಿಸ್ತಾನದಲ್ಲಿ ಪ್ರಜಾಪ್ರಭುತ್ವ ಸರ್ಕಾರ ಅಮಾನತುಗೊಂಡು, ಪಾಕಿಸ್ತಾನ ಸೇನೆ ಅಧಿಕಾರವನ್ನು ವಹಿಸಿಕೊಳ್ಳುವಂತಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.