ಈಗಿನ ಸುದ್ದಿ

ಎಸ್‌ಇಜಡ್ ಸಮಸ್ಯೆ: ಶನಿವಾರ ವಾಣಿಜ್ಯ ಅಧಿಕಾರಿಗಳೊಂದಿಗೆ ಪ್ರಧಾನಿ ಸಭೆ

ಎಸ್‌ಇಜಡ್ ಸಮಸ್ಯೆ: ಶನಿವಾರ ವಾಣಿಜ್ಯ ಅಧಿಕಾರಿಗಳೊಂದಿಗೆ ಪ್ರಧಾನಿ ಸಭೆ
Published On :

ನವದೆಹಲಿ: ವಿಶೇಷ ಆರ್ಥಿಕ ವಲಯದಲ್ಲಿ(ಎಸ್‌ಇಜಡ್) ಎದುರಿಸಲಾಗುತ್ತಿರುವ ತೆರಿಗೆ ಪದ್ಧತಿ ಹಾಗೂ ರಫ್ತು ಸೇರಿದಂತೆ ಇತರೆ ಸಮಸ್ಯೆ ಬಗ್ಗೆ ಚರ್ಚಿಸಲು ವಾಣಿಜ್ಯ ಅಧಿಕಾರಿಗಳು ಹಾಗೂ ಹಣಕಾಸು ಸಚಿವರೊಂದಿಗೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಸಭೆ ಕರೆದಿದ್ದಾರೆ.

ವಾಣಿಜ್ಯ ಇಲಾಖೆಯ ಕಾಯದರ್ಶಿ ರಾಜೀವ್ ಖೇರ್ ಮತ್ತು ಕಂದಾಯ ಇಲಾಖೆಯ ಕಾರ್ಯದರ್ಶಿ ರಾಜೀವ್ ಟಾಕ್ರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ವಿಶೇಷ ಆರ್ಥಿಕ ವಲಯದ ಮೇಲೆ ಹೇರಿರುವ ಕನಿಷ್ಟ ಪರ್ಯಾಯ ತೆರಿಗೆ(ಎಂಎಟಿ) ಸಮಸ್ಯೆ ಭಾರಿ ಪ್ರಭಾವ ಬೀರಿದ್ದು, ಸಣ್ಣ ಮತ್ತು ಮಧ್ಯಮ ಪ್ರಮಾಣದ ಐ.ಟಿ ಸಂಸ್ಥೆಗಳ ಮೇಲೆ ಹೆಚ್ಚಿನ ಹೊರೆ ಬೀಳುತ್ತಿದೆ. ಇದರಿಂದಾಗಿ ಉದ್ಯೋಗವಕಾಶ ಕಲ್ಪಿಸಲು ತೊಂದರೆಯಾಗುತ್ತಿದೆ.

ಅಲ್ಲದೇ ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲೂ ಸಮಸ್ಯೆ ಉಂಟಾಗಿದೆ. ಈ ಸಂಬಂಧ ಚರ್ಚೆ ನಡೆಸಲು ಪ್ರಧಾನಿ ಸಭೆ ಕರೆದಿದ್ದು, ಯೋಜನೆ ಬಗ್ಗೆ ಪೂರ್ಣ ವಿವರ ನೀಡುವಂತೆ ಸೂಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.