ಈಗಿನ ಸುದ್ದಿ

ಬದೌನ್‌ನಲ್ಲಿ ಮಹಿಳೆ ಮೇಲೆ ಗ್ಯಾಂಗ್‌ರೇಪ್: ಪೊಲೀಸ್ ಅಧಿಕಾರಿ ಪುತ್ರ ಭಾಗಿ

ಬದೌನ್‌ನಲ್ಲಿ ಮಹಿಳೆ ಮೇಲೆ ಗ್ಯಾಂಗ್‌ರೇಪ್: ಪೊಲೀಸ್ ಅಧಿಕಾರಿ ಪುತ್ರ ಭಾಗಿ
Published On :

ಬದೌನ್: ಉತ್ತರಪ್ರದೇಶದ ಬದೌನ್ ಜಿಲ್ಲೆಯಲ್ಲಿ ಕಳೆದ ಶುಕ್ರವಾರ ರಾತ್ರಿ ಮೂವರು ದುಷ್ಕರ್ಮಿಗಳು ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಬಿಸೌಲಿಯಲ್ಲಿ 32 ವರ್ಷದ ಮಹಿಳೆಯೊಬ್ಬರನ್ನು ಹೊತ್ತೊಯ್ದ ಮೂವರು ದುಷ್ಕರ್ಮಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಇದರಲ್ಲಿ ಪೊಲೀಸ್ ಅಧಿಕಾರಿ  ಮಗನು ಸೇರಿದ್ದಾನೆ ಎಂದು ಪೊಲೀಸ್ ಹಿರಿಯ ಅಧಿಕಾರಿ ಎಲ್.ಆರ್. ಕುಮಾರ್ ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ಅತ್ಯಾಚಾರಕ್ಕೊಳಗಾದ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಔಷಧಿ ತರಲೆಂದು ಮೆಡಿಕಲ್ ಸ್ಟೋರ್‌ವೊಂದಕ್ಕೆ ಹೋಗಿದ್ದರು.

ಈ ಸಮಯದಲ್ಲಿ ಪೊಲೀಸ್ ಅಧಿಕಾರಿಯೊರ್ವರ ಮಗ ಹಿಮಾಂಶು ಎಂಬುವನು ಮಗಳ ಸಹಿತ ಮಹಿಳೆಯನ್ನು ಹಾಳು ಮನೆಯೊಂದಕ್ಕೆ ಎಳೆದೊಯ್ದು ಕೂಡಿ ಹಾಕಿದ್ದಾನೆ. ಆ ನಂತರ ತನ್ನಿಬ್ಬರು ಸಹಚರರೊಂದಿಗೆ ಬಂದು ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಶನಿವಾರ ಅಲ್ಲಿಂದ ಹೊರ ಬಂದ ಮಹಿಳೆ ನೆರೆಹೊರೆಯವರಿಗೆ ಸುದ್ದಿ ತಿಳಿಸಿದ್ದು, ಸಾರ್ವಜನಿಕರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಈ ದೂರಿನನ್ವಯ ಹಿಮಾಂಶು, ಖಲೀಫಾ ಅಲಿಯಾಸ್ ಪ್ರಮೋದ್ ಹಾಗೂ ಮತ್ತೊಬ್ಬ ಅಪರಿಚಿತನ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಉತ್ತರಪ್ರದೇಶದಲ್ಲಿ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳ ಕುರಿತು ಜಾಗತಿಕ ಮಟ್ಟದಲ್ಲಿ ಟೀಕೆಗಳು ಕೇಳಿ ಬರುತ್ತಿದ್ದರು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸರ್ಕಾರ ಅತ್ಯಾಚಾರ ತಡೆಗೆ ಯಾವುದೇ ಕ್ರಮಕೈಗೊಳ್ಳದೆ ಇರುವುದು ಅವರ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.