ಈಗಿನ ಸುದ್ದಿ

ಭೂತಾನ್ ಸುಪ್ರೀಂ ಕೋರ್ಟ್ ಉದ್ಘಾಟಿಸಲಿರುವ ಮೋದಿ

ಭೂತಾನ್ ಸುಪ್ರೀಂ ಕೋರ್ಟ್ ಉದ್ಘಾಟಿಸಲಿರುವ ಮೋದಿ
Published On :

ಭೂತಾನ್: ಭೂತಾನ್ ಸುಪ್ರೀಂ ಕೋರ್ಟ್‌ನ್ನು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ಉಧ್ಘಾಟಿಸಿಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಭಾರತದ ಸಹಾಯದೊಂದಿಗೆ ನಿರ್ಮಿಸಲಾಗಿರುವ ಭೂತಾನ್ ಸುಪ್ರೀಂ ಕೋರ್ಟ್ ಕಟ್ಟಡವನ್ನು ಮೋದಿ ಉದ್ಧಾಟಿಸುತ್ತಾರೆ ಎಂದು ತಿಳಿದು ಬಂದಿದೆ.


ಎರಡು ದಿನಗಳ ಭೂತಾನ್ ಪ್ರವಾಸ ಕೈಗೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಭೂತಾನ್‌ಗೆ ಭೇಟಿ ನೀಡಿದ್ದಾರೆ.

ಭೂತಾನ್ ತಲುಪಿದ ಮೋದಿ ಅವರನ್ನು ಪ್ರಧಾನಿ ಶೆರಿಂಗ್ ತೊಗ್ಪೆ ಬರ ಮಾಡಿಕೊಂಡರು. ಭೂತನಾನಲ್ಲಿ ಮೋದಿ ಅವರಿಗೆ ಅದ್ಧೂರಿ ಸ್ವಾಗತ ಮಾಡಲಾಯಿತು. ಶಾಲಾ ಮಕ್ಕಳು ಹೂಗಳನ್ನು ನೀಡಿ ಮೋದಿ ಅವರನ್ನು ಸ್ವಾಗತಿಸಿದರು.

ಮೋದಿ ಅವರಿಗೆ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್, ರಾಷ್ಟ್ರೀಯ ಭದ್ರತಾ ಸಲಹಾಗಾರ ಅಜಿತ್‌ಕುಮಾರ್ ದೋವಲ್, ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್ ಸಾಥ್ ನೀಡಿದ್ದಾರೆ.

ಭೂತಾನ್ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮೋದಿ ಅವರು ಮಾತನಾಡಲಿದ್ದಾರೆ.

ಈ ಭೇಟಿ ಬಗ್ಗೆ ಮಾತನಾಡಿದ ಮೋದಿ, ಭೂತಾನ್‌ನೊಂದಿಗೆ ಉತ್ತಮ ಸಂಬಂಧ ಹೊಂದುವುದು ಎನ್‌ಡಿಎ ಸರ್ಕಾರದ ಆದ್ಯತೆಗಳೊಂದಾಗಿದೆ. ಉಭಯ ರಾಷ್ಟ್ರಗಳು ಸಮಾನ ಭೌಗೋಳಿಕ, ರಾಜಕೀಯ ಮತ್ತು ಸಾಂಸ್ಕೃತಿಕ ಇತಿಹಾಸವನ್ನು ಹೊಂದಿವೆ ಎಂದರು.

ಉಭಯ ರಾಷ್ಟ್ರಗಳ ಯುವಕರನ್ನು ಮತ್ತಷ್ಟು ಸದೃಡಗೊಳಿಸಬೇಕಾದ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಭೂತಾನ್‌ನೊಂದಿಗೆ ಶೈಕ್ಷಣಿಕ ಒಪ್ಪಂದಗಳನ್ನು ಮಾಡಿಕೊಳ್ಳುವ ಅಭಿಲಾಷೆಯನ್ನು ಮೋದಿ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.