ಈಗಿನ ಸುದ್ದಿ

ಮುಂಡೆ ದುರ್ಮರಣ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ

ಮುಂಡೆ ದುರ್ಮರಣ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ
Published On :

ನವದೆಹಲಿ:  ದೆಹಲಿಯ ರಸ್ತೆ ಅಪಘಾತದಲ್ಲಿ ಸಾವಿಗೀಡಾದ ಕೇಂದ್ರ ಸಚಿವ ಗೋಪಿನಾಥ್ ಮುಂಡೆ ದುರ್ಮರಣ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ.

ಮುಂಡೆ ಅವರ ದುರ್ಮರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಗೃಹ ಸಚಿವಾಲಯ ಶಿಫಾರಸು ಮಾಡಿತ್ತು.

ಮೋದಿ ಸರ್ಕಾರದಲ್ಲಿ ಕೇಂದ್ರ ಗ್ರಾಮಾಭಿವ್ಛದ್ಧಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದ ಮುಂಡೆ ಜೂನ್ 3ರಂದು ರಸ್ತೆ ಅಫಘಾತದಲ್ಲಿ ದುರ್ಮರಣಕ್ಕೀಡಾಗಿದ್ದರು.

ಅಪಘಾತದಲ್ಲಿ ತೀವ್ರಗಾಯಗೊಂಡ ಮುಂಡೆ ಅತೀವ ರಕ್ತಸ್ರಾವದಿಂದ ಸಾವಿಗೀಡಾಗಿದ್ದು ಮುಂಡೆ ಅವರ ಕಾರು ಚಾಲಕ 32ರ ಹರೆಯದ ಗುರುವಿಂದರ್ ಸಿಂಗ್ ವಿರುದ್ಧ ಕೇಸು ದಾಖಲಿಸಲಾಗಿತ್ತು.

ಮುಂಡೆ ದುರ್ಮರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಮಹಾರಾಷ್ಟ್ರದ ಬಿಜೆಪಿ ನಾಯಕರು ಹಾಗು ಬಿಜೆಪಿ ಮಾಜಿ ರಾಷ್ಟ್ರಾಧ್ಯಕ್ಷ ನಿತಿನ್ ಗಡ್ಕರಿ ಕೂಡಾ ಒತ್ತಾಯಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.