ದಶಕ ಕಳೆದರೂ ಉದ್ಘಾಟನೆಯಿಲ್ಲ
ಪಿ. ಶಾಂತಕುಮಾರ್
ಅರಸೀಕೆರೆ: ಸಾರ್ವಜನಿಕರ ಅನುಕೂಲಕ್ಕಾಗಿ ಸರ್ಕಾರ ಲಕ್ಷಾಂತರ ರು. ವೆಚ್ಚದಲ್ಲಿ ನಿರ್ಮಿಸಿದ ಸಮುದಾಯ ಭವನ ಕಾಮಗಾರಿ ಮುಕ್ತಾಯಗೊಂಡು ದಶಕಗಳೇ ಕಳೆದರೂ ಜನಪ್ರತಿನಿಧಿಗಳ ನಿರ್ಲಕ್ಷ್ಯ ಹಾಗೂ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಸಾರ್ವಜನಿಕ ಸೇವೆಗೆ ಲಭ್ಯವಾಗದೆ ಮೂಲೆ ಗುಂಪಾಗಿರುವುದಕ್ಕೆ ಪಟ್ಟಣದಲ್ಲಿನ ಪುರಸಭೆಯ ಸಮುದಾಯ ಭವನ ಇಂದಿಗೂ ಮೂಕ ಸಾಕ್ಷಿಯಾಗಿ ನಿಂತಿದೆ.
ಜಿ.ವಿ. ಸಿದ್ದಪ್ಪ ಶಾಸಕರಾಗಿದ್ದ ಅವಧಿಯಲ್ಲಿ ಸಣ್ಣ ಮತ್ತು ಮಧ್ಯಮ ಪಟ್ಟಣಗಳ ಅಭಿವೃದ್ಧಿ ಯೋಜನೆಯಡಿ ಸುಮಾರು ರು. 65 ಲಕ್ಷ ವೆಚ್ಚದಲ್ಲಿ ಕೋರ್ಟ್ ಸಮೀಪದ ಅಗ್ನಿ ಶಾಮಕ ದಳ ಕಚೇರಿ ಹಿಂಭಾಗ ಹೈಟೆಕ್ ಸಮುದಾಯ ಭವನ ನಿರ್ಮಿಸಲಾಗಿದೆ. ಎಲ್ಲ ಸೌಲಭ್ಯಗಳನ್ನು ಹೊಂದಿದ್ದರೂ ಸಮುದಾಯ ಭವನಕ್ಕೆ ಈವರೆಗೆ ಉದ್ಘಾಟನೆ ಭಾಗ್ಯ ಕೂಡಿಬಂದಿಲ್ಲ.
ಕಾಮಗಾರಿ ಪೂರ್ಣಗೊಂಡಾಗಲೇ ಕಟ್ಟಡ ಉದ್ಘಾಟನೆ ಆಗಿದ್ದರೆ ಬಾಡಿಗೆ ರೂಪದಲ್ಲಿ ಪುರಸಭೆಗೆ ಲಕ್ಷಾಂತರ ರುಪಾಯಿ ಆದಾಯ ಸಂದಾಯವಾಗುತ್ತಿತ್ತು. ಆದರೆ ಈ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುತ್ತಿಲ್ಲ. ಈ ಸಮುದಾಯ ಭವನ ಪಟ್ಟಣದ ಮಧ್ಯೆ ಭಾಗದಲ್ಲಿ ಬಿ.ಎಚ್. ರಸ್ತೆಗೆ ಹೊಂದಿಕೊಂಡಿದೆ. ನಾಲ್ಕು ಅಂತಸ್ತುಗಳನ್ನು ಹೊಂದಿದ್ದು ಪಾರ್ಕಿಂಗ್ ವ್ಯವಸ್ಥೆ ಹೊಂದಿದೆ. ಮೊದಲ ಅಂತಸ್ಥಿನಲ್ಲಿ ಒಂದು ಸಾವಿರಕ್ಕೂ ಹೆಚ್ಚಿನ ಜನ ಕುಳಿತುಕೊಳ್ಳುವಷ್ಟು ವ್ಯವಸ್ಥಿತ ಸಭಾಂಗಣವಿದೆ. ಆದರೆ ಎಲ್ಲ ಇದ್ದೂ ಏನೂ ಇಲ್ಲದ ಪರಿಸ್ಥಿತಿ ಉಂಟಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

