ಈಗಿನ ಸುದ್ದಿ

ನಿಹಾಲ್ ಚಂದ್ ವಿರುದ್ಧ ಕ್ರಮಕ್ಕೆ ಪ್ರಧಾನಿಗೆ ಮಹಿಳೆ ಮನವಿ

ನಿಹಾಲ್ ಚಂದ್ ವಿರುದ್ಧ ಕ್ರಮಕ್ಕೆ ಪ್ರಧಾನಿಗೆ ಮಹಿಳೆ ಮನವಿ
Published On :

ಜೈಪುರ್: ಅತ್ಯಾಚಾರ ಆರೋಪ ಎದುರಿಸುತ್ತಿರುವ ಕೇಂದ್ರ ಸಚಿವ ನಿಹಾಲ್ ಚಂದ್ ಮೇಘ್ವಾಲ್  ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಅತ್ಯಾಚಾರಕ್ಕೊಳಗಾದ ಮಹಿಳೆ ಪ್ರಧಾನಿ ನರೇಂದ್ರ ಮೋದಿಯವರಲ್ಲಿ ಮನವಿ ಮಾಡಿದ್ದಾರೆ.

2011ರಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಹಾಲ್‌ಚಂದ್ ಸೇರಿದಂತೆ 16 ಮಂದಿಗೆ ಜೈಪುರ ನ್ಯಾಯಾಲಯ ನೋಟೀಸ್ ಹೊರಡಿಸಿತ್ತು.

ತಮ್ಮ ಆರೋಪದ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಮಹಿಳೆ ಮೋದಿಯವರು ಒಳ್ಳೆಯ ವ್ಯಕ್ತಿ ಎಂದು ನನಗೆ ಗೊತ್ತು. ಆದರೆ ಅವರ ಸಚಿವ ಸಂಪುಟದಲ್ಲಿರುವ ಮೇಘ್ವಾಲ್ ಒಳ್ಳೆಯ ವ್ಯಕ್ತಿ ಅಲ್ಲ ಆತನನ್ನು ಪದಚ್ಯುತಗೊಳಿಸಬೇಕು ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ಸಂಪುಟದಲ್ಲಿ ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆಯ ರಾಜ್ಯ ಸಚಿವರಾಗಿದ್ದಾರೆ ಮೇಘ್ವಾಲ್.

2011ರಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿ ಮೇಘ್ವಾಲ್ ಭಾಗಿಯಾಗಿದ್ದಾರೆ. ಅವರನ್ನು ನಾನು ಗುರುತಿಸಬಲ್ಲೆ ಎಂದು ಮಹಿಳೆ ಹೇಳಿದ್ದಾರೆ.

ಅದೇ ವೇಳೆ ಪ್ರಕರಣವನ್ನು ವಾಪಾಸು ತೆಗೆದುಕೊಳ್ಳಬೇಕೆಂದು ಮೇಘ್ವಾಲ್ ತನೆಗೆ ಬೆದರಿಕೆಗಳನ್ನೊಡ್ಡಿದ್ದು ಮಾತ್ರವಲ್ಲದೆ ಪರಿಹಾರ ಧನ ಮತ್ತು ಕೆಲಸ ಕೊಡಿಸುವುದಾಗಿ ಆಫರ್ ನೀಡಿದ್ದರು ಎಂದು ಮಹಿಳೆ ದೂರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.