ನಿತಾರಿ ಹಂತಕರಿಗಿಲ್ಲ ಕ್ಷಮೆ: ಕೇಂದ್ರ ಗೃಹ ಇಲಾಖೆ

ನವದೆಹಲಿ: ಯಾವುದೇ ಕಾರಣಕ್ಕೂ ನಿತಾರಿ ಹಂತಕರಿಗೆ ಕ್ಷಮೆ ಇಲ್ಲ ಎಂದು ಕೇಂದ್ರ ಗೃಹ ಇಲಾಖೆ ಬುಧವಾರ ಸ್ಪಷ್ಟಪಡಿಸಿದೆ.
ಇಡೇ ದೇಶವನ್ನೇ ಬೆಚ್ಚಿಬೀಳಿಸಿದ್ದ ದಶಕಗಳ ಹಿಂದಿನ ನಿತಾರಿ ಸರಣಿ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕಠಿಣ ನಿಲುವು ತಳೆದಿದ್ದು, ಹತ್ಯಾಕಾಂಡದ ಹಂತಕರಿಗೆ ಯಾವುದೇ ಕಾರಣಕ್ಕೂ ಕ್ಷಮೆ ನೀಡಬಾರದು ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೇಂದ್ರ ಗೃಹ ಇಲಾಖೆ ಶಿಫಾರಸ್ಸು ಮಾಡಿದೆ.
2005 ಮತ್ತು 2006ರಲ್ಲಿ ನೋಯ್ಡಾದ ನಿತಾರಿ ಗ್ರಾಮದಲ್ಲಿ ನಡೆದಿದ್ದ ಸರಣಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಉದ್ಯಮಿ ಮೊಹಿಂದರ್ ಸಿಂಗ್ ಪಂಧೇರ್ ಮತ್ತು ಮನೆಕೆಲಸದಾಳು ಸುರೇಂದರ್ ಕೋಲಿ ಅಪರಾಧಿಗಳಾಗಿದ್ದಾರೆ. ಮೊಹಿಂದರ್ ಸಿಂಗ್ ಪಂಧೇರ್, ಸುರೇಂದರ್ ಕೋಲಿ ಇಬ್ಬರು ಸೇರಿ ಯುವತಿಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 19 ಮಂದಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದರು. ಅಲ್ಲದೆ ಕೊಲೆಗೀಡಾದವರ ದೇಹಗಳನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಹಾಕುತ್ತಿದ್ದರು. ಈಗಾಗಲೇ ನ್ಯಾಯಾಲಯ ಅವರಿಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು.
ಪ್ರಕರಣದ ಆರೋಪಿಯಾಗಿದ್ದ ಸುರೇಂದರ್ ಕೋಲಿ ತಾನು ಆರು ಮಕ್ಕಳನ್ನು ಕೊಂದು, 20 ವರ್ಷದ ಓರ್ವ ಯುವತಿಯನ್ನು ಅತ್ಯಾಚಾರ ಮಾಡಿದ್ದೇನೆ ಎಂದು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದನು. ಪ್ರಕರಣ ಸಂಬಂಧ ಒಟ್ಟು ಪ್ರಕರಣಗಳಲ್ಲಿ ಕೋಲಿಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿತ್ತು. ಉಳಿದಂತೆ ಮೊಹಿಂದರ್ ಸಿಂಗ್ ಪಂಧೇರ್ ವಿರುದ್ಧ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ 3 ಪ್ರಕರಣಗಳಲ್ಲಿ ಈತನಿಗೂ ಗಲ್ಲು ಶಿಕ್ಷೆ ವಿಧಿಸಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ್ದ ಅಲಹಾಬಾದ್ ಹೈಕೋರ್ಟ್ 2009ರಲ್ಲಿ ಈ ಇಬ್ಬರು ಆರೋಪಿಗಳಿಗೆ ಮರದಂಡನೆ ಶಿಕ್ಷೆ ವಿಧಿಸಿತ್ತು. ಬಳಿಕ ಈ ಇಬ್ಬರು ಅಪರಾಧಿಗಳು ತಮಗೆ ಕ್ಷಮಾದಾನ ನೀಡುವಂತೆ ರಾಷ್ಟ್ರಪತಿಗಳ ಮೊರೆಹೋಗಿದ್ದರು. ಇದೀಗ ಈ ಸರಣಿ ಹಂತಕರ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸುವಂತೆ ಕೇಂದ್ರ ಸರ್ಕಾರ ರಾಷ್ಟ್ರಪತಿಗಳಿಗೆ ಶಿಫಾರಸ್ಸು ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


