ಗದಗ ಬಳಿ ಭೀಕರ ಅಪಘಾತ: ಸಾವಿನ ಸಂಖ್ಯೆ 17ಕ್ಕೆ ಏರಿಕೆ

ಗದಗ: ನಿನ್ನೆ ರಾತ್ರಿ ಗದಗ ಜಿಲ್ಲೆ ಹುಲಕೋಟಿ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ಮೃತಪಟ್ಟವರೆಲ್ಲ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಸಿದ್ನೆಕೊಪ್ಪದವರಾಗಿದ್ದು, ನಿನ್ನೆ ಹುಬ್ಬಳ್ಳಿ ತಾಲೂಕಿನ ಉಮ್ಮಚಗಿ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಟ್ರಾಕ್ಟರ್ನಲ್ಲಿ ತೆರಳಿದ್ದರು. ಊಟ ಮುಗಿಸಿಕೊಂಡು ವಾಪಸ್ ಬರುತ್ತಿರುವಾಗ ರಾತ್ರಿ 8 ಗಂಟೆಯ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ 8 ಮಂದಿಯ ಪೈಕಿ ಇಂದು ಆರು ಮಂದಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಸುಮಾರು 20ಕ್ಕೂ ಹೆಚ್ಚು ಜನರು ಟ್ರಾಲಿಯಲ್ಲಿ ಕುಳಿತು ಪ್ರಯಾಣಿಸುತ್ತಿದ್ದರು. ಟ್ರ್ಯಾಕ್ಟರ್‌ಗೆ ಟಿಪ್ಪರ್ ಹಿಂದಿನಿಂದ ರಭಸವಾಗಿ ಡಿಕ್ಕಿ ಹೊಡೆದಿದ್ದು, ಮೃತರ ಸಂಖ್ಯೆ ಹೆಚ್ಚಲು ಕಾರಣವಾಗಿದೆ. 11 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡ 8 ಜನರನ್ನು ಗದಗ ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತ್ತು. ಈ ಪೈಕಿ ತೀವ್ರವಾಗಿ ಗಾಯಗೊಂಡ ನಾಲ್ವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಮೃತರ ಕುಟುಂಬಕ್ಕೆ ಲಕ್ಷ ರುಪಾಯಿ ಪರಿಹಾರ
ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 1 ಲಕ್ಷ ರುಪಾಯಿ ಹಾಗೂ ಗಾಯಾಳುಗಳಿಗೆ ತಲಾ 25 ಸಾವಿರ ರುಪಾಯಿ ಪರಿಹಾರ ನೀಡಲಾಗುವುದು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್ ಅವರು ಘೋಷಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


