ಹಿಂದಿ ಬಳಸದ ರಾಜ್ಯಗಳಿಗೆ ಹಿನ್ನಡೆ: ಚಿದಂಬರಂ

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿ ಭಾಷೆ ಹೇರುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು, ಸರ್ಕಾರದ ನಿರ್ಧಾರದಿಂದ ಹಿಂದಿ ಬಳಸದ ರಾಜ್ಯಗಳಿಗೆ ಹಿನ್ನಡೆಯಾಗಲಿದೆ ಎಂದು ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರು ವಿರೋಧ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಹಿಂದಿ ಭಾಷೆ ಬಳಸುವಂತೆ ಎಲ್ಲ ಸರ್ಕಾರಿ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಚಿದಂಬರಂ ಅವರು ಕಿಡಿಕಾರಿದ್ದಾರೆ. ಕೇಂದ್ರ ಸರ್ಕಾರದ ಈ ನೀತಿಯಿಂದಾಗಿ ಹಿಂದಿಯನ್ನು ಬಳಸದ ರಾಜ್ಯಗಳಿಗೆ ಹಿನ್ನಡೆಯಾಗಿಲಿದ್ದು, ಕೇಂದ್ರ ಸರ್ಕಾರ ಕೂಡಲೇ ತನ್ನ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಚಿದಂಬರಂ ಆಗ್ರಹಿಸಿದ್ದಾರೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಚೆನ್ನೈನಲ್ಲಿ ಮಾತನಾಡಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರು, ಮೋದಿ ಮೊದಲು ದೇಶದ ಅಭಿವೃದ್ಧಿಯತ್ತ ಮೊದಲು ಗಮನ ಹರಿಸಲಿ ಬಳಿಕ ಹಿಂದಿ ಭಾಷೆಯ ಪ್ರಚಾರ ಮಾಡಲಿ ಎಂದು ಕಿಡಿಕಾರಿದ್ದರು. ಅಲ್ಲದೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಕೂಡ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ.
ಈ ಹಿಂದೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರು ಕೂಡ ಕೇಂದ್ರ ಸರ್ಕಾರದ ನಡೆಯನ್ನು ವಿರೋಧಿಸಿದ್ದರು.
ಒಟ್ಟಾರೆ ಕೇಂದ್ರ ಸರ್ಕಾರದ ಈ ಸುತ್ತೋಲೆ ಕುರಿತಂತೆ ದಕ್ಷಿಣ ಭಾರತ ರಾಜ್ಯಗಳು ಸೇರಿದಂತೆ ಹಿಂದಿ ಬಳಸದ ರಾಜ್ಯಗಳಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು, ಅದರಲ್ಲಿಯೂ ಬಿಜೆಪಿ ಬೆಂಬಲ ನೀಡಿದ್ದ ತಮಿಳುನಾಡಿನ ಅಂಗಪಕ್ಷವಾದ ಎಂಡಿಎಂ ಪಕ್ಷ ಕೂಡ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಇದೀಗ ಮುಜುಗರ ಅನುಭವಿಸುವಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


