ಟಿಇಟಿ ಪ್ರಶ್ನೆ ಪತ್ರಿಕೆ ಬಹಿರಂಗ, ಮರು ಪರೀಕ್ಷೆ ಇಲ್ಲ: ಕಿಮ್ಮನೆ

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಾಲೆ ಶಿಕ್ಷಕರ ಅರ್ಹತಾ ಪ್ರವೇಶ ಪರೀಕ್ಷೆ(ಟಿಇಟಿ)ಯ ಪ್ರಶ್ನೆ ಪತ್ರಿಕೆ ಬಹಿರಂಗವಾಗಿದ್ದರೂ ಮರು ಪರೀಕ್ಷೆ ನಡೆಸುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ಸೋಮವಾರ ಹೇಳಿದ್ದಾರೆ.
ಪರೀಕ್ಷೆ ಮುನ್ನಾದಿನವೇ ಪ್ರಶ್ನೆ ಪತ್ರಿಕೆ ಬಹಿರಂಗವಾಗಿರುವುದರ ಕುರಿತು ಇಂದು ವಿಧಾನಸಭೆಯಲ್ಲಿ ಪ್ರತಿಕ್ರಿಯಿಸಿದ ಸಚಿವರು, ಪಶ್ನೆ ಪತ್ರಿಕೆ ಬಹಿರಂಗವಾಗಿರುವುದರ ಕುರಿತು ಇಲಾಖೆಯ ವತಿಯಿಂದ ತನಿಖೆ ನಡೆಸಲಾಗುವುದು. ಆದರೆ ಯಾವುದೇ ಕಾರಣಕ್ಕೂ ಮರು ಪರೀಕ್ಷೆ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಮೊದಲ ಬಾರಿ ನಡೆದ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು, ಈ ಸಂಬಂಧ ಆರೋಪಿ ನಿವೃತ್ತ ಶಿಕ್ಷಕ ಶಿವಕುಮಾರ(65), 10 ವಿದ್ಯಾರ್ಥಿಗಳು ಸೇರಿದಂತೆ 13 ಜನರನ್ನು ಸಿಸಿಬಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
10 ವಿದ್ಯಾರ್ಥಿಗಳ ಪ್ರವೇಶ ಪತ್ರವನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಭಾನುವಾರ ನಡೆದ 2 ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಶನಿವಾರ ನಗರದಲ್ಲಿ 1 ಲಕ್ಷಕ್ಕೆ ಮಾರಾಟವಾಗುತ್ತಿದ್ದವು.
ನಂದಿನಿ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಶಿವಕುಮಾರ್ ಮನೆ ಬಳಿ ವಿದ್ಯಾರ್ಥಿಗಳು ಸೇರಿದ್ದು ಹಣ ನೀಡಿ ಪ್ರಶ್ನೆಪತ್ರಿಕೆ ಪಡೆಯುತ್ತ್ತಿದ್ದರು. ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ ಶಿವಕುಮಾರ್, ಸ್ನೇಹಿತ ಸೋಮಶೇಖರ್, ಚಾಲಕ ಹಾಗೂ 10 ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


