ಈಗಿನ ಸುದ್ದಿ

ಪರಿಷತ್ ನಾಮನಿರ್ದೇಶನ: ಸರ್ಕಾರದ ಹಸ್ತಕ್ಷೇಪದ ವಿರುದ್ಧ ಹೈಕೋರ್ಟ್‌ಗೆ ರಿಟ್

ಪರಿಷತ್ ನಾಮನಿರ್ದೇಶನ: ಸರ್ಕಾರದ ಹಸ್ತಕ್ಷೇಪದ ವಿರುದ್ಧ ಹೈಕೋರ್ಟ್‌ಗೆ ರಿಟ್
Published On :

ಬೆಂಗಳೂರು: ವಿಧಾನಪರಿಷತ್ ಸದಸ್ಯರ ನಾಮನಿರ್ದೇಶನ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಮಾಡಿರುವ ಶಿಫಾರಸ್ಸನ್ನು ರದ್ದು ಮಾಡುವಂತೆ ಕೋರಿ ಹೈಕೋರ್ಟ್‌ಗೆ ಸೋಮವಾರ ರಿಟ್ ಅರ್ಜಿ ಸಲ್ಲಿಕೆಯಾಗಿದೆ.

ವಿಧಾನಪರಿಷತ್ ಸದಸ್ಯರ ನಾಮನಿರ್ದೇಶನ ಮಾಡುವ ಪರಮಾಧಿಕಾರ ರಾಜ್ಯಪಾಲರಿಗಿದ್ದು, ಈ ವಿಚಾರದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ಹೀಗಾಗಿ ಈ ಸಂಬಂಧ ಸರ್ಕಾರ ಮಾಡಿರುವ ಶಿಫಾರಸ್ಸು ರದ್ದು ಮಾಡುವಂತೆ ಸಾಹಿತಿ ಬನ್ನೂರು ಕೆ. ರಾಜು ಅವರು ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಪರಿಷತ್ ಸದಸ್ಯ ಸ್ಥಾನಕ್ಕೆ ರಾಜಕೀಯ ಒಡಂಬಡಿಕೆ ಇಲ್ಲದ ವಿಭಿನ್ನ ಕ್ಷೇತ್ರಗಳ ತಜ್ಞರ ನೇಮಕ ಮಾಡುವ ಪರಿಪಾಠವಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐವರ ಪೈಕಿ ನಾಲ್ವರು ಕಾಂಗ್ರೆಸ್ ಮುಖಂಡರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿತ್ತು. ವಿಧಾನಪರಿಷತ್ ಸದಸ್ಯರ ನಾಮನಿರ್ದೇಶನ ಮಾಡುವ ಅಧಿಕಾರ ರಾಜ್ಯಪಾಲರಿಗೆ ಇದ್ದು, ಇದರಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ಬನ್ನೂರು ಕೆ. ರಾಜು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

ನಾಮನಿರ್ದೇಶನ ಬಗ್ಗೆ ಸಂವಿಧಾನದ 171 ಕಲಂ ಆಧರಿಸಿ ಮಾರ್ಗಸೂಚಿ ರಚನೆ ಮಾಡುವಂತೆ ರಾಜು ಅವರು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಐವರು ಗಣ್ಯರನ್ನು ಮೇಲ್ಮನೆಗೆ ನಾಮನಿರ್ದೇಶನ ಮಾಡುವುದು ಸರ್ಕಾರದ ಕರ್ತವ್ಯ. ಆದರೆ ಕಾಂಗ್ರೆಸ್ ಸರ್ಕಾರ ಈ ಬಾರಿ ಮೇಲ್ಮನೆಗೆ ರಾಜಕೀಯ ಹಿನ್ನೆಲೆ ಇರುವವರನ್ನೇ ಆಯ್ಕೆ ಮಾಡಿದೆ.

ಸಾಹಿತ್ಯ, ಕಲೆ, ಸಹಕಾರ ಚಳವಳಿ, ವಿಜ್ಞಾನ ಮತ್ತು ಸಮಾಜ ಸೇವೆಯಲ್ಲಿ ತೊಡಗಿಕೊಂಡ ವ್ಯಕ್ತಿಗಳನ್ನು ವಿಧಾನ ಪರಿಷತ್‌ಗೆ ನಾಮ ನಿರ್ದೇಶನ ಮಾಡಬಹುದು ಎಂಬ ನಿಯಮ ಇದೆ. ಆದರೆ ಅನೇಕ ಬಾರಿ ಸಮಾಜ ಸೇವೆಯ ಹೆಸರಿನಲ್ಲಿ ರಾಜಕಾರಣಿಗಳನ್ನೇ ನಾಮನಿರ್ದೇಶನ ಮಾಡುವ ಪರಿಪಾಠ ಬೆಳೆದುಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.