ಈಗಿನ ಸುದ್ದಿ

ಪರಿಷತ್ ಚುನಾವಣೆ: ಜೆಡಿಎಸ್‌ನ ಪುಟ್ಟಣ್ಣ ಹ್ಯಾಟ್ರಿಕ್ ಗೆಲುವು

ಪರಿಷತ್ ಚುನಾವಣೆ: ಜೆಡಿಎಸ್‌ನ ಪುಟ್ಟಣ್ಣ ಹ್ಯಾಟ್ರಿಕ್ ಗೆಲುವು
Published On :

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪುಟ್ಟಣ್ಣ ಅವರು ಹ್ಯಾಟ್ರಿಕ್ ಗೆಲವು ಸಾಧಿಸಿದ್ದಾರೆ.

ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಕಳೆದ ಗುರುವಾರ ಚುನಾವಣೆ ನಡೆದಿತ್ತು. ಚುನಾವಣೆಯಲ್ಲಿ ಒಟ್ಟು 16, 690 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು. ಈ ಪೈಕಿ ಪುಟ್ಟಣ್ಣ ಅವರು 8,522 ಮತಗಳನ್ನು ಪಡೆಯುವುದರೊಂದಿಗೆ ಸತತ ಮೂರನೇ ಬಾರಿ ಗೆಲವು ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಎಂ. ನೀಲಯ್ಯ ಅವರು ಎರಡನೇ ಸ್ಥಾನ ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ವೆಂಕಟೇಶ್ ಅವರು ಮೂರನೇ ಸ್ಥಾನಕ್ಕೆ ತೃಪ್ತಿಪಡುವಂತಾಗಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಬಿಜೆಪಿಯ ಎಂ.ನೀಲಯ್ಯ, ಕಾಂಗ್ರೆಸ್‌ನ ಬಿ.ಕೆ.ವೆಂಕಟೇಶ್, ಜೆಡಿಎಸ್‌ನ ಪುಟ್ಟಣ್ಣ, ಶಿಕ್ಷಣ ತಜ್ಞ ಗುರುರಾಜ್ ಕರಜಗಿ ಕಣದಲ್ಲಿದ್ದರು.

ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು
ಬಿಜೆಪಿ ಭದ್ರಕೋಟೆ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಮೊದಲ ಬಾರಿಗೆ ಗೆಲುವು ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರು ಭರ್ಜರಿ ಗೆಲವು ಸಾಧಿಸಿದ್ದಾರೆ.

ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಕಳೆದ ಗುರುವಾರ ಚುನಾವಣೆ ನಡೆದಿತ್ತು. ಚುನಾವಣೆಯಲ್ಲಿ ಒಟ್ಟು 19,182 ಮತಗಳು ಚಲಾವಣೆಯಾಗಿದ್ದವು. ಈ ಪೈಕಿ ಮಟ್ಟೂರು ಅವರು 9022 ಮತಗಳನ್ನು ಪಡೆದುಕೊಂಡಿದ್ದಾರೆ. ಪ್ರತಿಸ್ಪರ್ಧಿ ನಮೋಶಿ ಅವರು 2089 ಮತಗಳನ್ನು ಪಡೆದು ಎರಡನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಇನ್ನು 1403 ಮತಗಳು ತಿರಸ್ಕೃತಗೊಂಡಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.