ಮೇಲ್ಮನೆ: ರಾಜ್ಯ ಸರ್ಕಾರದ ಪರಿಷ್ಕೃತ ಪಟ್ಟಿಗೆ ರಾಜ್ಯಪಾಲರ ಅಂಗೀಕಾರ

ಬೆಂಗಳೂರು: ವಿಧಾನಪರಿಷತ್‌ಗೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿದ್ದ ಐವರ ಹೆಸರನ್ನು ಒಳಗೊಂಡಿರುವ ಪಟ್ಟಿಯನ್ನು ರಾಜ್ಯಪಾಲ ಹಂಸರಾಜ್ ಭರದ್ವಾಜ್ ಅವರು ಅಂಗೀಕಾರ ಮಾಡಿದ್ದಾರೆ.
ವಿ.ಎಸ್.ಉಗ್ರಪ್ಪ, ನಟಿ ಜಯಮಾಲಾ, ಐವಿನ್ ಡಿಸೋಜಾ, ಇಕ್ಬಾಲ್ ಅಹಮದ್ ಸರಡಗಿ ಮತ್ತು ಅಬ್ದುಲ್ ಜಬ್ಬಾರ್ ಅವರನ್ನು ಮೇಲ್ಮನೆಗೆ ನಾಮನಿರ್ದೇಶನಕ್ಕೆ ರಾಜ್ಯಪಾಲರು ಅಂಗೀಕಾರ ಮಾಡಿದ್ದಾರೆ. ಸಮಾಜಸೇವಾ ವಿಭಾಗದಡಿಯಲ್ಲಿ ಈ ಐವರ ಹೆಸರುಗಳಿಗೆ ಅನುಮೋದನೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ಇಂದು ಸಂಜೆ ರಾಜಭವನಕ್ಕೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಮಾರು 45ನಿಮಿಷಗಳ ಕಾಲ ಈ ಕುರಿತಂತೆ ಚರ್ಚಿಸಿದ್ದಾರೆ. ಚರ್ಚೆ ವೇಳೆಯಲ್ಲಿ ರಾಜ್ಯಪಾಲ ಹಂಸರಾಜ್ ಭಾರಧ್ವಾಜ್ ಅವರು ರಾಜ್ಯ ಸರ್ಕಾರದ ವಿವಾದಿತ ಪಟ್ಟಿ ಕುರಿತಂತೆ ಮತ್ತು ಈ ಐವರು ಯಾವ ಮಾನದಂಡದಲ್ಲಿ ಸಮಾಜಸೇವಾ ಕೋಟಾದಡಿಯಲ್ಲಿ ಬರುತ್ತಾರೆ..? ಎಂದು ಪ್ರಶ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಅದಾಗ್ಯೂ ಹಂಸರಾಜ್ ಭರದ್ವಾಜ್ ಅವರು ರಾಜ್ಯ ಸರ್ಕಾರದ ಪಟ್ಟಿಗೆ ಅಂಗೀಕಾರ ನೀಡಿದ್ದಾರೆ.
ಮೇಲ್ಮನೆ ಆಯ್ಕೆ ಕುರಿತಂತೆ ಇದಕ್ಕೂ ಮೊದಲು ರಾಜ್ಯ ಸರ್ಕಾರದ ಶಿಫಾರಸ್ಸಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು, ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಹೀಗಾಗಿಯೇ ಇಂದು ಸಂಜೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೂತನ ಪರಿಷ್ಕತ ಪಟ್ಟಿಯೊಂದಿಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲರೊಂದಿಗೆ ಚರ್ಚಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


