ಸುಪ್ರೀಂ ನ್ಯಾಯಾಧೀಶರ ಹುದ್ದೆಗೆ ನನ್ನನ್ನು ಪರಿಗಣಿಸಬೇಡಿ: ಸುಬ್ರಹ್ಮಣ್ಯಂ

ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಾಧೀಶ ಹುದ್ದೆಗೆ ನನ್ನ ಹೆಸರು ಪರಿಗಣಿಸಬೇಡಿ ಎಂದು ಹಿರಿಯ ನ್ಯಾಯವಾದಿ ಹಾಗೂ ಮಾಜಿ ಸಾಲಿಸಿಟರಲ್ ಜನರಲ್ ಗೋಪಾಲ್ ಸುಬ್ರಮಣ್ಯಂ ಅವರು ಬುಧವಾರ ಹೇಳಿದ್ದಾರೆ.
ಈ ಸಂಬಂಧ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿರುವ ಸುಬ್ರಹ್ಮಣ್ಯಂ ಅವರು, ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಹುದ್ದೆಗೆ ತಮ್ಮ ಹೆಸರು ಶಿಫಾರಸು ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರತಿಕ್ರಿಯಿಸಿರುವ ಅವರು, ಸರ್ಕಾರ ನ್ಯಾಯಾಂಗವನ್ನು ಗೌರವಿಸಬೇಕು, ನನ್ನ ವಿರುದ್ಧ ಬಂದಿರುವ ಆರೋಪಗಳೆಲ್ಲ ಸುಳ್ಳು ಮತ್ತು ದುರುದ್ದೇಶದಿಂದ ನನ್ನ ವಿರುದ್ಧ ವರದಿ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಯುಪಿಎ ಸರ್ಕಾರದಲ್ಲಿ ಸಾಲಿಸಿಟರಲ್ ಜನರಲ್ ಆಗಿ ಸೇವೆ ಸಲ್ಲಿಸಿದ್ದ ಸುಬ್ರಹ್ಮಣ್ಯಂ ಹಾಗೂ ಇತರೆ ಮೂವರು ಅಭ್ಯರ್ಥಿಗಳ ಹೆಸರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಹುದ್ದೆಗೆ ಆಯ್ಕೆ ಮಾಡಲಾಗಿತ್ತು. ಆದರೆ ಎನ್ಡಿಎ ಸರ್ಕಾರ ಸುಬ್ರಹ್ಮಣ್ಯಂ ಸ್ವಾಮಿ ಅವರ ಹೆಸರನ್ನು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯಂ ಅವರೇ ಅಭ್ಯರ್ಥಿತನದಿಂದ ಹಿಂದೆ ಸರಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


