ಈಗಿನ ಸುದ್ದಿ

ಅತ್ಯಾಚಾರ ಆರೋಪ: ಶಾರುಖ್ ಡ್ರೈವರ್ ಅರೆಸ್ಟ್

ಅತ್ಯಾಚಾರ ಆರೋಪ: ಶಾರುಖ್ ಡ್ರೈವರ್ ಅರೆಸ್ಟ್
Published On :

ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ಅವರ ಕಾರಿನ ಚಾಲಕ ಪಿಂಟು ಮಿಶ್ರಾನನ್ನು 17 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪದ ಪೊಲೀಸರು ಗುರುವಾರ ಬಂಧಿಸಿದ್ದಾರೆ.

34 ವರ್ಷದ ರಾಜೇಂದ್ರ ಕುಮಾರ್ ಗೌತಮ್ ಅಲಿಯಾಸ್ ಪಿಂಟು ಮಿಶ್ರಾ ಎಂಬಾತನನ್ನು ಮುಂಬೈನ ಬಾಂದ್ರಾ ಪೊಲೀಸರು ಬಂಧಿಸಿದ್ದು, ಬಾಲಿವುಡ್ ನಟಿ ಸಂಗೀತಾ ಬಿಜಲಾನಿ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ 17 ವರ್ಷದ ಬಾಲಕಿಗೆ ಸೆಲೆಬ್ರಿಟಿಗಳ ಮನೆಯಲ್ಲಿ ಕೆಲಸಕೊಡಿಸುವ ಆಮಿಷ ಒಡ್ಡಿ ಅತ್ಯಾಚಾರ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಬಂಧಿತನು ಖ್ಯಾತ ನಟ ಶಾರುಖ್ ಖಾನ್ ಅವರ ಬಳಿ ಕಾರು ಚಾಲಕನಾಗಿದ್ದು, ಶಾರುಕ್ ಮಕ್ಕಳನ್ನು ಶಾಲೆಗೆ ಕರೆದೋಯ್ದು, ವಾಪಸ್ ಕರೆತರುವ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.

ಶಾರುಖ್ ಮನೆಯಲ್ಲಿ ಕೆಲಸ ಮಾಡುತ್ತಿದ್ದುದನ್ನೇ ಅಸ್ತ್ರವಾಗಿ ಬಳಸಿಕೊಂಡ ಈತ, ತನಗೆ ಬಾಲಿವುಡ್ ಸೆಲೆಬ್ರಿಟಿಗಳ ಪರಿಚಯವಿದೆ. ಅವರ ಮನೆಯಲ್ಲಿ ಕೆಲಸ ಕೊಡಿಸುವುದಾಗಿ ಪುಸಲಾಯಿಸಿ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ. ಪಿಂಟು ಮಿಶ್ರಾನನ್ನು ಪ್ರಸ್ತುತ ಬಾಂದ್ರಾ ಪೊಲೀಸರು ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಬಾಲಕಿ ಮೂಲತಃ ಲಾತೂರ್ ಮೂಲದವಳಾಗಿದ್ದು, ಕೆಲಸವನ್ನು ಅರಸಿ 5 ತಿಂಗಳ ಹಿಂದಷ್ಟೇ ಮುಂಬೈಗೆ ಆಗಮಿಸಿದ್ದಳು. ಪರಿಚಿತರ ಸಹಾಯದಿಂದ ಬಾಲಿವುಡ್ ನಟಿ ಸಂಗೀತಾ ಬಿಜಲಾನಿ ಅವರ ನಿವಾಸದಲ್ಲಿ ಬಾಲಕಿಗೆ ಕೆಲಸ ದೊರೆಯಿತು. ತನಗೆ ಮತ್ತು ಬಾಲಕಿಗೆ ಪರಿಚಯವಿದ್ದವರಿಂದ ಬಾಲಕಿಯ ವಿವರ ಪಡೆದ ಚಾಲಕ ಪಿಂಟು ಶರ್ಮಾ ನಂತರ ಕೆಲಸ ಕೊಡಿಸುವ ಆಮಿಷ ಒಡ್ಡಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಈ ಕೃತ್ಯವೆಸಗಿದ್ದಾನೆ. ಬಾಲಕಿಯ ಮೇಲೆ ಅತ್ಯಾಚಾರವಾಗಿರುವುದು ವೈದ್ಯಕೀಯ ಪ್ರಾಥಮಿಕ ವರದಿಗಳ ಪ್ರಕಾರ ಧೃಢಪಟ್ಟಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೂಲತಃ ಬಾಲಕಿಯ ಕುಟುಂಬದವರು ಆರ್ಥಿಕವಾಗಿ ಹಿಂದುಳಿದವರಾಗಿದ್ದು, ಬಾಲಕಿಯ ದುಡಿಮೆಯಿಂದಲೇ ಕುಟುಂಬ ನಿರ್ವಹಣೆಯಾಗುತ್ತಿತ್ತು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.