ಈಗಿನ ಸುದ್ದಿ

ನೂತನ ರಾಜ್ಯಪಾಲರ ಪಟ್ಟಿ ಬಹುತೇಕ ಅಂತಿಮ

ನೂತನ ರಾಜ್ಯಪಾಲರ ಪಟ್ಟಿ ಬಹುತೇಕ ಅಂತಿಮ
Published On :

ನವದೆಹಲಿ: ಬಜೆಟ್ ಅಧಿವೇಶನಕ್ಕೂ ಮುನ್ನವೇ 10 ನೂತನ ರಾಜ್ಯಪಾಲರನ್ನು ನೇಮಕ ಮಾಡಲು ಎನ್‌ಡಿಎ ಸರ್ಕಾರ ನಿರ್ಧರಿಸಿದ್ದು, ಹೊಸ ರಾಜ್ಯಪಾಲರ ಪಟ್ಟಿ ಬಹುತೇಕ ಅಂತಿಮವಾಗಿದೆ.

ವಿ.ಕೆ.ಮಲ್ಹೋತ್ರಾ, ಕೈಲಾಶ್ ಜೋಶಿ, ಕಲ್ಯಾಣ ಸಿಂಗ್, ಬಲರಾಮ್ ದಾಸ್ ಟಂಡನ್, ಕೇಸರಿ ನಾಥ್ ತ್ರಿಪಾಠಿ, ಯಶ್ವಂತ್ ಸಿನ್ಹಾ ಹಾಗೂ ಜಸ್ವಂತ್ ಸಿಂಗ್ ಅವರು ನೂತನ ರಾಜ್ಯಪಾಲರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಜು. 7ರಿಂದ ಬಜೆಟ್ ಅಧಿವೇಶನ ನಡೆಯಲಿದ್ದು, ಮೂರ್ನಾಲ್ಕು ದಿನಗಳಲ್ಲೇ ಈ ಕುರಿತಂತೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದೆ.

ಯುಪಿಎ ಸರ್ಕಾರದ ಅವಧಿಯಲ್ಲಿ ವಿವಿಧ ರಾಜ್ಯಗಳಿಗೆ ರಾಜ್ಯಪಾಲರಾಗಿ ನೇಮಕಗೊಂಡಿದ್ದವರಿಗೆ ರಾಜಿನಾಮೆ ನೀಡುವಂತೆ ಹೊಸದಾಗಿ ಅಧಿಕಾರಕ್ಕೆ ಬಂದ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ, ಛತ್ತೀಸ್‌ಗಢ ಹಾಗೂ ಉತ್ತರಪ್ರದೇಶ ರಾಜ್ಯಗಳ ರಾಜ್ಯಪಾಲರು ರಾಜಿನಾಮೆ ಸಲ್ಲಿಸಿದ್ದರು.

ಗೋವಾ ರಾಜ್ಯಪಾಲರಾದ ಬಿ.ವಿ. ವಾಂಕೂ, ಪಶ್ಚಿಮ ಬಂಗಾಳದ ಎಂ.ಕೆ. ನಾರಾಯಣನ್ ಅವರೂ ರಾಜಿನಾಮೆ ಸಲ್ಲಿಸುವ ವದಂತಿಗಳಿವೆ.ಇನ್ನು ಕರ್ನಾಟಕದ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರ ಅಧಿಕಾರವಧಿ ಇದೇ ಜೂನ್ 29ಕ್ಕೆ ಅಂತ್ಯಗೊಳ್ಳಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.