ಈಗಿನ ಸುದ್ದಿ

ಸುಷ್ಮಾ ಸ್ವರಾಜ್, ಶೇಖ್ ಹಸೀನಾ ಭೇಟಿ

ಸುಷ್ಮಾ ಸ್ವರಾಜ್, ಶೇಖ್ ಹಸೀನಾ ಭೇಟಿ
Published On :

ಢಾಕಾ: ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಗುರುವಾರ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಅವರನ್ನು ಭೇಟಿ ಮಾಡಿದರು.

2 ದಿನಗಳ ಬಾಂಗ್ಲಾದೇಶ ಪ್ರವಾಸ ಕೈಗೊಂಡಿರುವ ಸುಷ್ಮಾ ಅವರನ್ನು ಇಂದು ಬಾಂಗ್ಲಾ ವಿದೇಶಾಂಗ ಸಚಿವ ಅಬುಲ್ ಹಸನ್ ಮಹಮ್ಮದ್ ಅಲಿ ಅವರು ಬರಮಾಡಿಕೊಂಡರು. ನಂತರ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾರನ್ನು ಭೇಟಿ ಮಾಡಿದ ಸುಷ್ಮಾ ಅವರು, ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಮಾತುಕತೆಗೆ ಚಾಲನೆ ನೀಡಿದರು.

ಭೇಟಿ ವೇಳೆ ಉಭಯ ನಾಯಕರು ಗಡಿ ವಿವಾದ, ಅಕ್ರಮ ಗಡಿ ನುಸುಳುವಿಕೆ, ಗಡಿ ಒಪ್ಪಂದ ಮತ್ತು ತೀಸ್ತಾ ನದಿ ನೀರು ಹಂಚಿಕೆ ವಿವಾದ ಕುರಿತಂತೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ಇದಲ್ಲದೆ ಭಾರತದ ತ್ರಿಪುರದಲ್ಲಿರುವ ಪಲಟನಾ ಅನಿಲಾಧಾರಿತ ವಿದ್ಯುತ್ ಯೋಜನೆಯನ್ನು ಬಾಂಗ್ಲಾದೇಶದಲ್ಲಿಯೂ ಅಳವಡಿಸುವ ಕುರಿತು ಮಾತುಕತೆ ನಡೆಸಿದ್ದಾರೆ. ಇನ್ನು ಉಭಯ ರಾಷ್ಟ್ರಗಳ ನಡುವೆ ಇರುವ ಬಾಂಧವ್ಯವನ್ನು ಮತ್ತಷ್ಟು ಸುಧಾರಿಸಲು ವೀಸಾ ನೀತಿ ಸಡಿಲಿಕೆಗೆ ಸಂಬಂಧಿಸಿದಂತೆ ಚರ್ಚಿಸಲಾಗಿದೆ.

ಬಾಂಗ್ಲಾದಿಂದ ಭಾರತಕ್ಕೆ ವಲಸೆ ಬರುವ ವಲಸಿಗರಲ್ಲಿ 13 ವರ್ಷದೊಳಗಿರುವ ಹಾಗೂ 65 ವರ್ಷ ಮೇಲ್ಪಟ್ಟವರಿಗೆ ನೀಡುವ ವಿಶೇಷ ವೀಸಾದ ಮೇಲಿನ ನೀತಿ ಸಡಿಲಿಕೆ ಕುರಿತು ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ. ಆದರೆ ಈ ಬಗ್ಗೆ ಯಾವುದೇ ರೀತಿಯ ಅಧಿಕೃತ ಒಪ್ಪಂದಗಳಿಗೆ ಉಭಯ ನಾಯಕರು ಸಹಿ ಹಾಕಿಲ್ಲ ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಬಾಂಗ್ಲಾದೇಶದೊಂದಿಗಿನ ತೀಸ್ತಾ ನದಿ ನೀರು ಹಂಚಿಕೆ ಮತ್ತು ಗಡಿ ವಿವಾದ ಒಪ್ಪಂದ ಸರಳೀಕರಣಕ್ಕೆ ತೃಣಮೂಲ ಕಾಂಗ್ರೆಸ್ ಮತ್ತು ಅಸೋಮ್ ಗಣಪರಿಷತ್ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಆಗ ಬಿಜೆಪಿ ಪ್ರತಿಪಕ್ಷ ಸ್ಥಾನದಲ್ಲಿತ್ತು.

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಪ್ರಸ್ತುತ ಬಾಂಗ್ಲಾದೇಶ ಪ್ರವಾಸ ಅಧಿಕೃತವಾಗಿ ಮೊದಲ ಪ್ರವಾಸವಾಗಿದ್ದು, ಸುಷ್ಮಾ ಅವರಿಗೆ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್ ಅವರು ಸಾಥ್ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.