ಈಗಿನ ಸುದ್ದಿ

ಅಸ್ಸಾಂ: ಕುಂಭದ್ರೋಣ ಮಳೆಗೆ 6 ಸಾವು

ಅಸ್ಸಾಂ: ಕುಂಭದ್ರೋಣ ಮಳೆಗೆ 6 ಸಾವು
Published On :

ಗುವಾಹಟಿ: ಅಸ್ಸಾಂನಲ್ಲಿ ಕುಂಭದ್ರೋಣ ಮಳೆಯಿಂದಾಗಿ 6 ಜನ ಸಾವನ್ನಪ್ಪಿದ್ದು, 33 ಗ್ರಾಮಗಳ ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ಕಳೆದ 3 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಲ್ಲಿನ ಸುತ್ತಮುತ್ತಲಿನ ಗ್ರಾಮಗಳಾದ ಲಕ್ಷ್ಮಿಪುರ, ದರ್ರಂಗ್, ಸೋನಿಪುರ, ಉದಲ್‌ಪುರಿಯಲ್ಲಿ ಪ್ರವಾಹ ಪ್ರಾರಂಭವಾಗಿದೆ. ಸರ್ಕಾರಿ ಕಚೇರಿಗಳು ಬಂದ್ ಆಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.

ಈಗಾಗಲೇ ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದ್ದು, ಸುತ್ತಮುತ್ತಲಿನ ಗ್ರಾಮಗಳಲ್ಲಿ ಪ್ರವಾಹ ಭೀತಿ ಶುರುವಾಗಿದೆ. ರಾಷ್ಟ್ರೀಯ ಹೆದ್ದಾರಿಯೂ ಸೇರಿದಂತೆ ತೇಜ್‌ಪುರ, ಧೇಮ್‌ಜಿ, ಲಕ್ಷ್ಮೀಪುರ ಸೇರಿದಂತೆ ಇನ್ನೂ 15 ಗ್ರಾಮಗಳ ಸಂಪರ್ಕ ಖಡಿತಗೊಂಡಿದೆ. ನೆರೆ ಪೀಡಿತ ಪ್ರದೇಶಗಳಲ್ಲಿ ಒಂದಾದ ಮಾರಿಗಾಂವ್‌ನಲ್ಲಿ ರಕ್ಷಣಾ ಕಾರ್ಯಾಚರಣೆ ಪ್ರಾರಂಭವಾಗಿದ್ದು, ಭದ್ರತಾ ಸಿಬ್ಬಂದಿಗಳು  ಜನರನ್ನು ಸುರಕ್ಷಿತ ಸ್ಥಳಗಳಿಗೆ ಕೊಂಡೊಯ್ಯುವ ಕಾರ್ಯದಲ್ಲಿ ಮಗ್ನರಾಗಿದ್ದಾರೆ.

ಅಲ್ಲದೆ ನೆರೆ ಸಂತ್ರಸ್ಥರಿಗೆ ಪ್ರಥಮ ಚಿಕಿತ್ಸೆ ಹಾಗೂ ಆಹಾರ ವ್ಯವಸ್ಥೆ ಮಾಡುವ ಕಾರ್ಯದಲ್ಲಿ ರಕ್ಷಣಾ ಪಡೆಗಳು ತೊಡಗಿವೆ. ಭದ್ರತಾ ಪಡೆಗಳೊಂದಿಗೆ ಸ್ಥಳೀಯ ಸಂಘ ಸಂಸ್ಥೆಗಳು ಕೈಜೋಡಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯಕವಾಗಿವೆ. ಅಲ್ಲದೆ ಅಧಿಕಾರಿಗಳಿಗೆ ಗ್ರಾಮಗಳ ಕುರಿತು ಮಾಹಿತಿ ನೀಡುತ್ತಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.