ಈಗಿನ ಸುದ್ದಿ

ರಾಜ್ಯದ ಹಂಗಾಮಿ ರಾಜ್ಯಪಾಲರಾಗಿ ರೋಸಯ್ಯ ನೇಮಕ

ರಾಜ್ಯದ ಹಂಗಾಮಿ ರಾಜ್ಯಪಾಲರಾಗಿ ರೋಸಯ್ಯ ನೇಮಕ
Published On :

ನವದೆಹಲಿ: ತಮಿಳುನಾಡು ರಾಜ್ಯಪಾಲ ಕೆ.ರೋಸಯ್ಯ ಅವರನ್ನು ಕರ್ನಾಟಕದ ಹಂಗಾಮಿ ರಾಜ್ಯಪಾಲರನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಇದೇ ಜೂನ್ 29ಕ್ಕೆ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರ ಅಧಿಕಾರವಧಿ ಅಂತ್ಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹೊಸ ರಾಜ್ಯಪಾಲರ ನೇಮಕವಾಗುವರೆಗೆ ರೋಸಯ್ಯ ಅವರಿಗೆ ಹೆಚ್ಚುವರಿಯಾಗಿ ರಾಜ್ಯದ ಉಸ್ತುವಾರಿ ನೀಡಿ ರಾಷ್ಟ್ರಪತಿಗಳು ಆದೇಶಿಸಿದ್ದಾರೆ.

ಕರ್ನಾಟಕ ರಾಜ್ಯಪಾಲರ ಎಚ್.ಆರ್.ಭಾರದ್ವಾಜ್ ಅವರ ಅಧಿಕಾರವಧಿ ಜೂನ್ 29ಕ್ಕೆ ಪೂರ್ಣಗೊಂಡಿದ್ದು, ಹೊಸ ರಾಜ್ಯಪಾಲರು ನೇಮಕವಾಗುವ ತನಕ ತಮಿಳುನಾಡು ರಾಜ್ಯಪಾಲರು ಕರ್ನಾಟಕದ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ ಎಂದು ಇಂದು ಹೊರಡಿಸಲಾದ ರಾಷ್ಟ್ರಪತಿ ಭವನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಭಾರದ್ವಾಜ್ ಅವರಿಂದ ತೆರವಾಗುವ ಸ್ಥಾನಕ್ಕೆ ಕೇಂದ್ರ ಸರ್ಕಾರ ಯಾರನ್ನು ನೇಮಕ ಮಾಡಲಿದೆ ಎಂಬುದು ತೀವ್ರ ಕೂತುಹಲ ಮೂಡಿಸಿದೆ. ರಾಜ್ಯದ ರಾಜ್ಯಪಾಲರ ಹುದ್ದೆಗೆ ಬಿಜೆಪಿ ಹಿರಿಯ ನಾಯಕರಾದ ಮುರಳಿ ಮನೋಹರ್ ಜೋಶಿ, ಯಶವಂತ್ ಸಿನ್ಹಾ, ವಿ.ಕೆ.ಮಲ್ಹೋತ್ರಾ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.