ಗುಜರಾತ್‌ನ ಶಿಪ್ ಬ್ರೇಕಿಂಗ್ ಯಾರ್ಡ್‌ನಲ್ಲಿ ಸ್ಫೋಟ: 5 ಸಾವು

ಅಹ್ಮದಾಬಾದ್: ಗುಜರಾತ್‌ನ ಭಾವ್‌ನಗರದಲ್ಲಿರುವ ಅಲಾಂಗ್ ಹಡಗು ದುರಸ್ತಿ ಘಟಕದಲ್ಲಿ ಗ್ಯಾಸ್ ಪೈಪ್ ಲೈನ್ ಸೋರಿಕೆಯಿಂದಾಗಿ ಉಂಟಾದ ಸ್ಫೋಟದಲ್ಲಿ 5 ಜನ ಮೃತಪಟ್ಟಿದ್ದು, 16 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಆಂಧ್ರಪ್ರದೇಶದ ನಗರಂ ಪ್ರದೇಶದಲ್ಲಿ ನಿನ್ನೆ ಸಂಭವಿಸಿದ ಗ್ಯಾಸ್ ಪೈಪ್ ಲೈನ್ ಸ್ಫೋಟ ಪ್ರಕರಣ ಇನ್ನೂ ಹಸಿರಾಗಿರುವಂತೆಯೇ ಇಂದು ಗುಜರಾತ್‌ನಲ್ಲಿಯೂ ಇಂತಹುದೇ ದುರಂತ ಸಂಭವಿಸಿದೆ.
ಗುಜರಾತ್‌ನ ಭಾವ್‌ನಗರದಲ್ಲಿರುವ ಅಲಾಂಗ್ ಶಿಪ್ ಬ್ರೇಕಿಂಗ್ ಯಾರ್ಡ್‌ನ, ಪ್ಲಾಟ್ ನಂ 140ರಲ್ಲಿ ಇಂದು ಬೆಳಗ್ಗೆ 11 ಗಂಟೆಯ ಸುಮಾರಿನಲ್ಲಿ ಗ್ಯಾಸ್ ಪೈಪ್‌ಲೈನ್ ಸ್ಫೋಟಗೊಂಡು ಐವರು ಧಾರುಣವಾಗಿ ಸಾವನ್ನಪ್ಪಿದ್ದಾರೆ. ಅಲ್ಲದೆ ಘಟನೆಯಲ್ಲಿ ಸುಮಾರು 6ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಭಾವ್‌ನಗರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ನಿನ್ನೆಯಷ್ಟೇ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಪ್ರಾಂತ್ಯದಲ್ಲಿನ ನಗರಂನಲ್ಲಿ 18 ಇಂಚಿನ ಗ್ಯಾಸ್ ಪೈಪ್‌ಲೈನ್ ಸ್ಫೋಟಗೊಂಡ ಪರಿಣಾಮ 15 ಮಂದಿ ಸಾವಿಗೀಡಾಗಿ, 18 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಅಲ್ಲದೆ ಸ್ಫೋಟದ ರಭಸಕ್ಕೆ ಸುತ್ತಮುತ್ತಲಿನ ಗ್ರಾಮಗಳ ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟ ಉಂಟಾಗಿತ್ತು.
ಲ್ಯಾಂಕೋ ಇನ್ಫ್ರಾಟೆಕ್ ಎಂಬ ಖಾಸಗಿ ವಿದ್ಯುತ್ ಉತ್ಪಾದನಾ ಸಂಸ್ಥೆಗೆ ಈ ಕೊಳವೆಯ ಮೂಲಕ ಅನಿಲ ಸಾಗಿಸಲಾಗುತ್ತಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


