ಚೆನ್ನೈ: 12 ಅಂತಸ್ತಿನ ಕಟ್ಟಡ ಕುಸಿತ, ಓರ್ವ ಸಾವು

ಚೆನ್ನೈ: ಚೆನ್ನೈನ ಹೊರವಲಯದ ನಿರ್ಮಾಣ ಹಂತದ 12 ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು, ಓರ್ವ ಸಾವನ್ನಪ್ಪಿದ್ದಾನೆ. 50ಕ್ಕೂ ಅಧಿಕ ಮಂದಿ ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗುತ್ತಿದೆ.
ಚೆನ್ನೈನ ಹೊರವಲಯದಲ್ಲಿರುವ ಮೌಲಿವಾಕ್ಕಂನಲ್ಲಿ ಸುಮಾರು ಒಂದೂವರೆ ಎಕರೆ ಪ್ರದೇಶದಲ್ಲಿ ಈ ಕಟ್ಟಡವನ್ನು ನಿರ್ಮಿಸಲಾಗುತ್ತಿತ್ತು. ದುರಂತ ನಡೆದ ಸಂದರ್ಭದಲ್ಲಿ ಕಟ್ಟಡದಲ್ಲಿ ಸುಮಾರು 50ಕ್ಕೂ ಅಧಿಕ ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ 12 ಅಗ್ನಿಶಾಮಕ ವಾಹನಗಳು, 80 ಕ್ಕೂ ಹೆಚ್ಚು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ತುರ್ತು ಕಾರ್ಯಾಚರಣೆ ನಡೆಸಿರುವ ರಕ್ಷಣಾ ಸಿಬ್ಬಂದಿ ಇದೀಗ 10 ಮಂದಿ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಗಾಯಾಳುಗಳ ಪೈಕಿ 8 ಮಂದಿಯನ್ನು ರಾಮಚಂದ್ರ ವೈದ್ಯಕೀಯ ಕಾಲೇಜು ಮತ್ತು ಇಬ್ಬರನ್ನು ಕೀಳ್ಪಾಕ್ಕಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಲ್ಲದೆ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ರಾತ್ರಿ ಇಡೀ ರಕ್ಷಣಾ ಕಾರ್ಯಾಚರಣೆಗೆ ಸಿಬ್ಬಂದಿ ಮುಂದಾಗಿದ್ದು, ಘಟನಾ ಸ್ಥಳದಲ್ಲಿ ಸೂಕ್ತ ಬೆಳಕಿನ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಮೂಲಗಳ ಪ್ರಕಾರ ಕಟ್ಟಡವು ಕಳಪೆ ಕಾಮಗಾರಿಯಿಂದ ಕೂಡಿದ್ದು, ಇಂದು ಬಿದ್ದ ಗುಡುಗು ಮಿಂಚು ಸಹಿತ ಮಳೆಗೆ ಕಟ್ಟಡ ಕುಸಿದು ಬಿದ್ದಿದೆ ಎಂದು ತಿಳಿದುಬಂದಿದೆ. ಪ್ರಕರಣವನ್ನು ದಾಖಲಿಸಿಕೊಂಡಿರುವ ಚೆನ್ನೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


