ಈಗಿನ ಸುದ್ದಿ

ನಾನೂ ಮೊದಲ ಬಾರಿಯ ಸಂಸದ; ಕಲಿಯುವುದು ಸಾಕಷ್ಟಿದೆ: ಪ್ರಧಾನಿ

ನಾನೂ ಮೊದಲ ಬಾರಿಯ ಸಂಸದ; ಕಲಿಯುವುದು ಸಾಕಷ್ಟಿದೆ: ಪ್ರಧಾನಿ
Published On :

ಸೂರಜ್‌ಕುಂಡ್: ನಾನೂ ಸಹ ಮೊದಲ ಬಾರಿಗೆ ಸಂಸದನಾಗಿ ಆಯ್ಕೆಯಾಗಿದ್ದೇನೆ. ಹೀಗಾಗಿ ಕಲಿಯಬೇಕಾದ್ದು ಸಾಕಷ್ಟಿದೆ ಮತ್ತು ಕಲಿಯುತ್ತಿದ್ದೇನೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ.

ಹರಿಯಾಣದ ಸೂರಜ್‌ಕುಂಡ್‌ನಲ್ಲಿ ನಡೆಯುತ್ತಿರುವ ಮೊದಲ ಬಾರಿಗೆ ಸಂಸತ್‌ಗೆ ಆಯ್ಕೆಯಾದ ಸಂಸದರ ಎರಡು ದಿನಗಳ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ನಾನು ಸಹ ಮೊದಲ ಬಾರಿಗೆ ಸಂಸತ್‌ಗೆ ಆಯ್ಕೆಯಾಗಿದ್ದೇನೆ. ಹೀಗಾಗಿ ನಾನು ನನ್ನ ಹಿರಿಯರಿಂದ ಸಾಕಷ್ಟು ಕಲಿಯಬೇಕಿದೆ ಎಂದರು.

ಈ ವೇಳೆ, ನಿಮಗೆ ಏನಾದರೂ ಸಹಾಯ ಬೇಕಿದ್ದರೆ ನೇರವಾಗಿ ನನ್ನ ಅಥವಾ ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡುವಂತೆ 161 ನೂತನ ಸಂಸದರಿಗೆ ಪ್ರಧಾನಿ ಸೂಚಿಸಿದರು. ಅಲ್ಲದೆ ಭ್ರಷ್ಟಚಾರ ಮತ್ತು ಸ್ವಜನ ಪಕ್ಷಪಾತದಿಂದ ದೂರವಿರುವಂತೆ ಸಲಹೆ ನೀಡಿದರು.

ಸಂಸತ್ತಿನ ನಿಯಮಗಳನ್ನು ಪಾಲಿಸಿ ಮತ್ತು ಸಂಸತ್ ಅಧಿವೇಶನಕ್ಕೆ ಬರುವ ಮುನ್ನ ಚೆನ್ನಾಗಿ ತಯಾರಿಯಾಗಿ ಬನ್ನಿ. ನಾವು ಭಾರಿ ಬಹುಮತದಿಂದ ಗೆದ್ದು ಈಗ ಕೇಂದ್ರದಲ್ಲಿ ಕಾಂಗ್ರೆಸ್ ಮುಕ್ತ ಸರ್ಕಾರ ರಚಿಸಿದ್ದೇವೆ. ಅದೇ ರೀತಿ ವಿಧಾನಸಭೆ ಚುನಾವಣೆಗಳಲ್ಲೂ ಜಯ ಸಾಧಿಸಬೇಕು ಎಂದು ಮೋದಿ ಹೇಳಿದರು.

63 ವರ್ಷದ ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿಯಿಂದ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.