ಈಗಿನ ಸುದ್ದಿ

17 ಭಾರತೀಯ ಮೀನುಗಾರರ ಬಂಧಿಸಿದ ಶ್ರೀಲಂಕಾ ನೌಕಾಪಡೆ

17 ಭಾರತೀಯ ಮೀನುಗಾರರ ಬಂಧಿಸಿದ ಶ್ರೀಲಂಕಾ ನೌಕಾಪಡೆ
Published On :

ರಾಮೇಶ್ವರಂ: ಲಂಕಾಗೆ ಸೇರಿದ ಗಡಿಯಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ 17 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯ ಅಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ.

ಬಂಧಿತರಲ್ಲೆರೂ ತಮಿಳುನಾಡಿನ ರಾಮೇಶ್ವರಂಗೆ ಸೇರಿದವರೆನ್ನಲಾಗುತ್ತಿದ್ದು, ಶ್ರೀಲಂಕಾಗೆ ಸೇರಿದ ಕಚ್ಚಾತೀವು ಸಮುದ್ರ ಗಡಿಯಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ. ಅಲ್ಲದೆ ಬಂಧಿತರಿಂದ ಮೂರು ಮೀನುಗಾರಿಕಾ ಬೋಟ್ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪ್ರಸ್ತುತ ಬಂಧಿತರಲ್ಲೆರನ್ನೂ ಕಚ್ಚಾತೀವು ಪ್ರದೇಶದಿಂದ ತಲೈಮನ್ನಾರ್ ಪ್ರದೇಶಕ್ಕೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಅಕ್ರಮ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಕೇವಲ ಒಂದು ತಿಂಗಳ ಅವಧಿಯಲ್ಲಿ 2ನೇ ಬಾರಿಗೆ ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯ ಅಧಿಕಾರಿಗಳು ಬಂಧಿಸಿದ್ದಾರೆ. ಇದೇ ಜೂನ್ 24ರಂದು ಕೂಡ ಲಂಕಾ ಅಧಿಕಾರಿಗಳು ತಮಿಳುನಾಡಿನ ಪುದುಕೋಟೈ ಮೂಲದ 11 ಮೀನುಗಾರರನ್ನು ವಶಕ್ಕೆ ಪಡೆದಿದ್ದರು. ಬಳಿಕ ಅವರನ್ನು ಬಿಡುಗಡೆ ಮಾಡಲಾಗಿತ್ತು. ಆದರೆ ಅಂದು ಅವರಿಂದ ವಶಪಡಿಸಿಕೊಳ್ಳಲಾಗಿದ್ದ ಮೀನುಗಾರಿಕಾ ಬೋಟ್ಗಳನ್ನು ಇದುವರೆಗೂ ಹಿಂದುರಿಗಿಸಿಲ್ಲ.

ತಮಿಳುನಾಡಿನ ಮೀನುಗಾರರನ್ನು ಲಂಕಾ ಅಧಿಕಾರಿಗಳು ಉದ್ದೇಶಪೂರ್ವಕವಾಗಿಯೇ ಬಂಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಜಯಲಲಿತಾ ಅವರು ಈ ಹಿಂದೆ ಆರೋಪಿಸಿದ್ದರು. ಅಲ್ಲದೆ ಈ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಹಾಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಕೂಡ ಸರಣಿ ಪ್ರತ್ರಗಳನ್ನು ಬರೆದು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು. ಕಳೆದ ವಾರ ಕೂಡ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದ ಜಯಲಲಿತಾ ಅವರು ತಮ್ಮ ಮೀನುಗಾರರನ್ನು ಕೂಡಲೇ ಬಿಡುಗಡೆ ಮಾಡಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಲಂಕಾ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಅವರನ್ನು ಆಹ್ವಾನಿಸಿದ ಕೇಂದ್ರ ಸರ್ಕಾರದ ಕ್ರಮಕ್ಕೆ ತೀವ್ರ ಅಸಮಾಧಾನವನ್ನು ಕೂಡ ವ್ಯಕ್ತಪಡಿಸಿದ್ದ ಜಯಲಲಿತಾ ಅವರು, ಮೀನುಗಾರರ ಅಕ್ರಮ ಬಂಧನ ಸೇರಿದಂತೆ ಲಂಕಾದಲ್ಲಿನ ತಮಿಳರ ಮೇಲಿನ ದೌರ್ಜನ್ಯ ಪ್ರಕರಣವನ್ನು ಉದಾಹರಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.