ಈಗಿನ ಸುದ್ದಿ

ಬಿ.ಟೆಕ್, ಬಿಎಂಎಸ್ ಸ್ಥಗಿತ: ಡಿಯು ವಿರುದ್ಧ ಪ್ರತಿಭಟನೆ

ಬಿ.ಟೆಕ್, ಬಿಎಂಎಸ್ ಸ್ಥಗಿತ: ಡಿಯು ವಿರುದ್ಧ ಪ್ರತಿಭಟನೆ
Published On :

ನವದೆಹಲಿ: ಬಿ.ಟೆಕ್ ಮತ್ತು ಬಿಎಂಎಸ್ ವಿಷಯಗಳನ್ನು ಸ್ಥಗಿತಗೊಳಿಸುವ ದೆಹಲಿ ವಿಶ್ವವಿದ್ಯಾಲಯ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ಭಾನುವಾರ ದೆಹಲಿಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ತೊಡಗಿದ್ದಾರೆ.

ದೆಹಲಿ ವಿವಿಯ ನಾಲ್ಕು ವರ್ಷಗಳ ಪದವಿ ಪೂರ್ವ ಕಾರ್ಯಕ್ರಮಕ್ಕೆ ಯುಜಿಸಿ ಸೇರಿದಂತೆ ವಿದ್ಯಾರ್ಥಿಗಳಿಂದಲೂ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಈ ಹಿಂದಿನಂತೆ ಮೂರು ವರ್ಷಗಳ ಪದವಿ ಕೋರ್ಸ್‌ಗಳನ್ನು ಮುಂದುವರೆಸಲು ವಿವಿ ನಿರ್ಧರಿಸಿತ್ತಾದರೂ, ಪ್ರಸಕ್ತ ವರ್ಷದಿಂದ ಬಿ.ಟೆಕ್ ಮತ್ತು ಬಿಎಂಎಸ್ ಕೋರ್ಸ್‌ಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿತ್ತು. ಅಲ್ಲದೆ ಈ ಕುರಿತು ತನ್ನ ಸಿಬ್ಬಂದಿ ವರ್ಗಕ್ಕೆ  ಸೂಚನೆ ನೀಡಿದ್ದ ವಿವಿ, ಪ್ರಸಕ್ತ ಸಾಲಿನಿಂದ ಬಿ.ಟೆಕ್ ಮತ್ತು ಬಿಎಂಎಸ್ ಕೋರ್ಸ್‌ಗಳಿಗೆ ಪ್ರವೇಶ ಪಡೆಯದಂತೆ ಸೂಚನೆ ನೀಡಿತ್ತು.

ದೆಹಲಿ ವಿವಿಯ ಈ ನಿರ್ಧಾರ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಬಿ.ಟೆಕ್ ಮತ್ತು ಬಿಎಂಎಸ್ ಕೋರ್ಸ್‌ಗಳನ್ನು ಸ್ಥಗಿತಗೊಳಿಸದಂತೆ ವಿದ್ಯಾರ್ಥಿಗಳು ಆಗ್ರಹಿಸುತ್ತಿದ್ದಾರೆ. ಈ ಕುರಿತಂತೆ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರ ದೆಹಲಿ ನಿವಾಸದ ಎದುರು ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ಅಲ್ಲದೆ ದೆಹಲಿ ವಿಶ್ವವಿದ್ಯಾಲಯದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.

ದೆಹವಿ ವಿವಿಯ ಈ ವಿವಾದಿತ ನಿರ್ಧಾರದ ಕುರಿತು ಯುಜಿಸಿ ಹಾಗೂ ಮಾನವ ಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಗಮನ ಹರಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಇಲ್ಲವಾದಲ್ಲಿ ನ್ಯಾಯಾಲಯದ ಮೊರೆ ಹೋಗುವುದಾಗಿ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ.

ಒಟ್ಟಾರೆ ತನ್ನ ನಿರ್ಧಾರಗಳಿಂದಾಗಿಯೇ ದೆಹಲಿ ವಿಶ್ವವಿದ್ಯಾಲಯ ಸದಾ ವಿವಾದಕ್ಕೆ ಗುರಿಯಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.