ಯುಪಿ: ಹದಗೆಟ್ಟ ಕಾನೂನು ಸುವ್ಯವಸ್ಥೆ; ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಲಖನೌ: ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಆರೋಪಿಸಿ ಲಖನೌನಲ್ಲಿ ಬಿಜೆಪಿ ಕಾರ್ಯಕರ್ತರು ಭಾರಿ ಪ್ರತಿಭಟನೆ ನಡೆಸಿದ್ದಾರೆ.
ಲಖನೌನಲ್ಲಿರುವ ಉತ್ತರ ಪ್ರದೇಶ ವಿಧಾನಸೌಧದ ಬಳಿ ನೆರೆದಿರುವ ನೂರಾರು ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ಅಲ್ಲದೆ ಬ್ಯಾರಿಕೇಡ್‌ಗಳನ್ನು ಮುರಿದು ವಿಧಾನಸೌಧದ ಒಳಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದು, ಲಘು ಲಾಠಿ ಪ್ರಹಾರವನ್ನು ಕೂಡ ನಡೆಸಿದ್ದಾರೆ.
ಬಿಜೆಪಿ ಯುವಮೋರ್ಚಾ ಘಟಕ ನಡೆಸುತ್ತಿರುವ ಪ್ರತಿಭಟನೆ ಇದೀಗ ಹಿಂಸಾರೂಪಕ್ಕೆ ತಿರುಗಿದ್ದು, ಪೊಲೀಸರು ಪ್ರತಿಭಟನಾಕಾರರ ಮೇಲೆ ಜಲಫಿರಂಗಿ ಮತ್ತು ಅಶ್ರುವಾಯು ಪ್ರಯೋಗಿಸಿದ್ದಾರೆ. ಬದನೌ ಗ್ರಾಮದಲ್ಲಿನ ಸಹೋದರಿಯರ ಮೇಲಿನ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ಮತ್ತು ಕಳೆದ ಒಂದು ತಿಂಗಳಿನಿಂದ ಉತ್ತರ ಪ್ರದೇಶದಲ್ಲಿ ನಡೆದ ಅಪರಾಧ ಕೃತ್ಯಗಳ ಪ್ರಮಾಣದ ಏರಿಕೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


