ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಸಚಿವರ ದಿಢೀರ್ ಭೇಟಿ, ಪರಿಶೀಲನೆ

ನವದೆಹಲಿ: ಕೇಂದ್ರ ಸಚಿವ ಪ್ರಕಾಶ್ ಜಾವೇದ್ಕರ್ ಅವರು ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಸೋಮವಾರ ದಿಢೀರ್ ಭೇಟಿ ನೀಡಿದರು.
ಇಂದು ಬೆಳಗ್ಗೆ 9.15ರ ಸಮಯದಲ್ಲಿ ಕಚೇರಿಗೆ ಭೇಟಿ ನೀಡಿ ಹಾಜರಾತಿ ಪುಸ್ತಕ ನೋಡಿ ಶಾಕ್ ಆಗಿದ್ದಾರೆ. ಸಿಬ್ಬಂದಿಗಳು ನಿಗದಿತ ಸಮಯಕ್ಕೆ ಕಚೇರಿಗೆ ಬಾರದೆ ಖಾಲಿ ಹೊಡೆಯುತ್ತಿರುವ ಕುರ್ಚಿಗಳನ್ನು ಕಂಡ ಸಚಿವ ಪ್ರಕಾಶ್ ಜಾವೇದ್ಕರ್ ಕೆಂಡ ಮಂಡಲವಾಗಿದ್ದರು.
ಸಮಯಕ್ಕೆ ಸರಿಯಾಗಿ ಕಚೇರಿಗೆ ಬಾರದ ಸಿಬ್ಬಂದಿಯನ್ನು ಹೊರಗೆ ನಿಲ್ಲಿಸುವಂತೆ ಹಾಗೂ ದಿನದ ರಜೆ ಅರ್ಜಿ ನೀಡುವಂತೆ ಸೂಚಿಸಿದ್ದರು. ನಿಗದಿತ ಸಮಯಕ್ಕೆ ಹಾಜರಾಗದ ಸುಮಾರು 200 ಮಂದಿ ಸಿಬ್ಬಂದಿಗಳು ಕಚೇರಿಯ ಮುಂದೆ ಸಾಲುಗಟ್ಟಿ ನಿಂತಿದ್ದು, ಇವರನ್ನು ಸೋಮಾರಿಗಳ ಪಟ್ಟಿಗೆ ಸೇರಿದ್ದಾರೆ.
ಕನಿಷ್ಠ ಸರ್ಕಾರ, ಗರಿಷ್ಠ ಆಡಳಿತ ಎಂಬ ಮಂತ್ರ ವಾಕ್ಯದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸರ್ಕಾರ ರಚಿಸಿದ್ದರು. ಅದರಂತೆ ಮೋದಿ ಕ್ಯಾಬಿನೆಟ್ನಲ್ಲಿ ಪ್ರಕಾಶ್ ಜಾವೇದ್ಕರ್ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವರಾಗಿದ್ದಾರೆ. ಯಾವುದೇ ಸಚಿವಾಲಯಗಳಿಗೆ ಅರ್ಜಿ ಬಂದ 4 ರಿಂದ 7 ದಿನಗಳೊಳಗಾಗಿ ಅರ್ಜಿ ಇತ್ಯಾರ್ಥವಾಗಬೇಕು. ಇದರಿಂದಾಗಿ ಸಿಬ್ಬಂದಿಗಳು ಹೆಚ್ಚು ಶ್ರಮಬದ್ಧತೆಯಿಂದ ಕಾರ್ಯನಿರ್ವಹಿಸುವಂತೆ ಸೂಚಿಸಿದ್ದರು.
ಮೇನಲ್ಲಿ ಅಧಿಕಾರ ಸ್ವೀಕರಿಸಿದ್ದ ಪ್ರಕಾಶ್ ಜಾವೇದ್ಕರ್ ಹಾಜರಾತಿ ಪುಸ್ತಕ ಕಂಡು ಶಾಕ್ ಹಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


