ಈಗಿನ ಸುದ್ದಿ

ಸೋಲಿನ ಪರಾಮರ್ಶೆ: ಸಿದ್ದು, ಪರಮೇಶ್ವರಗೆ ಹೈಕಮಾಂಡ್ ಬುಲಾವ್

ಸೋಲಿನ ಪರಾಮರ್ಶೆ:  ಸಿದ್ದು, ಪರಮೇಶ್ವರಗೆ ಹೈಕಮಾಂಡ್ ಬುಲಾವ್
Published On :

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ದಿಡೀರ್ ದೆಹಲಿಗೆ ಬರುವಂತೆ ಮಂಗಳವಾರ ಸೂಚಿಸಿದೆ.

ಲೋಕಸಭೆ ಚುನಾವಣೆಯಲ್ಲಿ ಪಕ್ಷ ಹೀನಾಯ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಸೋಲಿನ ಕುರಿತು ಚರ್ಚಿಸಲು ನಾಳೆ ಮಧ್ಯಾಹ್ನ ಚಿಂತನ ಮಂಥನ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಭಾಗವಹಿಸುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್, ಸಿಎಂ ಸಿದ್ದರಾಮಯ್ಯ ಹಾಗೂ ಪರಮೇಶ್ವರ ಅವರಿಗೆ ಸೂಚಿಸಲಾಗಿದೆ.

ಮಾಜಿ ಕೇಂದ್ರ ಸಚಿವ ಎ.ಕೆ.ಆಂಟನಿ ನೇತೃತ್ವದಲ್ಲಿ ಎಐಸಿಸಿ ಕಚೇರಿಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಲೋಕಸಭೆ ಚುನಾವಣೆ ಸೋಲಿನ ಪರಾಮರ್ಶೆ, ಪಕ್ಷದಲ್ಲಿನ ಭಿನ್ನಮತ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧ್ಯಕ್ಷರ ಬದಲಾವಣೆ ಹಾಗೂ ಪಕ್ಷದ ಪದಾಧಿಕಾರಿಗಳ ಪುನರಾಯ್ಕೆ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.