ಈಗಿನ ಸುದ್ದಿ

ಚೀನಾ: ಕುನ್ಮಿಂಗ್ ರೈಲ್ವೇ ನಿಲ್ದಾಣದಲ್ಲಿ ಚಾಕು ಇರಿತ, 33 ಸಾವು

ಚೀನಾ: ಕುನ್ಮಿಂಗ್  ರೈಲ್ವೇ ನಿಲ್ದಾಣದಲ್ಲಿ ಚಾಕು ಇರಿತ, 33 ಸಾವು
Published On :

ಬೀಚಿಂಗ್: ಚೀನಾದ ಯುನಾನ್ ಪ್ರಾಂತ್ಯದ ಕುನ್ಮಿಂಗ್ ರೈಲು ನಿಲ್ದಾಣದಲ್ಲಿ ಅಪರಿಚಿತ ದುಷ್ಕರ್ಮಿಗಳು ಜನರ ಮೇಲೆ ಮಾರಕಾಸ್ತ್ರಗಳಿಂದ 'ಅಮಾನವೀಯ'ವಾಗಿ ದಾಳಿ ಮಾಡಿದ್ದು, ಘಟನೆಯಲ್ಲಿ ಸುಮಾರು 33 ಮಂದಿ ಧಾರುಣವಾಗಿ ಮೃತಪಟ್ಟಿದ್ದಾರೆ.

ಕುನ್ಮಿಂಗ್ ರೈಲ್ವೇ ನಿಲ್ದಾಣಕ್ಕೆ ನುಗ್ಗಿದ ದುಷ್ಕರ್ಮಿಗಳು ರೈಲಿಗಾಗಿ ಕಾಯುತ್ತಿದ್ದ ಮತ್ತು ರೈಲು ಟಿಕೆಟ್ ಪಡೆಯಲು ಸಾಲು ನಿಂತಿದ್ದ ಪ್ರಯಾಣಿಕರ ಮೇಲೆ ದಿಢೀರ್ ದಾಳಿ ಮಾಡಿದ್ದಾರೆ. ದುಷ್ಕರ್ಮಿಗಳು ಪ್ರಯಾಣಿಕರ ಮೇಲೆ ಚೂರಿಯಿಂದ ಮನ ಬಂದಂತೆ ದಾಳಿ ಮಾಡಿದ್ದಾರೆ. ಇದರಿಂದಾಗಿ ಸ್ಥಳದಲ್ಲೇ 33 ಮಂದಿ ಮೃತಪಟ್ಟಿದ್ದು, 130ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೂಡಲೆ ಸ್ಥಳಕ್ಕಾಗಮಿಸಿ ಪೊಲೀಸರು ನಾಲ್ವರು ದುಷ್ಕರ್ಮಿಗಳನ್ನು ಕೊಂದು ಹಾಕಿದ್ದು, ಓರ್ವನನ್ನು ಬಂಧಿಸಿದ್ದಾರೆ. ಇನ್ನುಳಿದ ದುಷ್ಕರ್ಮಿಗಳಿಗಾಗಿ ಪೊಲೀಸರು ಕಾರ್ಯಚರಣೆ ನಡೆಸುತ್ತಿದ್ದು, ಪ್ರತ್ಯೇಕವಾದಿ ತೀವ್ರಗಾಮಿಗಳ ಕೃತ್ಯವಿರಬಹುದೆಂದು ಶಂಕಿಸಲಾಗಿದೆ.

ನೈಋತ್ಯ ಚೀನಾದ ಯುನಾನ್ ಪ್ರಾಂತ್ಯದ ರಾಜಧಾನಿ ಮತ್ತು ದೊಡ್ಡ ನಗರವಾಗಿರುವ ಕುನ್ಮಿಂಗ್‌ನಲ್ಲಿ ಈ ದಾಳಿ ನಡೆದಿದ್ದು, ಜನರು ಬೆಚ್ಚಿ ಬೀಳುವಂತಾಗಿದೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.