ದಲಿತರು ಡಿಸಿಎಂ ಆಗಲು ಬಿಡುತ್ತಿಲ್ಲ: ಪರಮೇಶ್ವರ್

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಅಪಸ್ವರವಿರುವುದು ನಿಜ. ದಲಿತರು ಅಧಿಕಾರ ವಹಿಸಿಕೊಳ್ಳುಲು ಇಲ್ಲಿ ಬಿಡುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಹೇಳಿದ್ದಾರೆ.
ಛಲವಾದಿ ಸಮಾವೇಶದಲ್ಲಿ ಮಾತನಾಡಿದ ಪರಮೇಶ್ವರ ಅವರು, ಹಿಂದುಳಿದ ಸಮುದಾಯಗಳು ಒಗ್ಗೂಡಬೇಕಾಗಿದ್ದು, ಇಲ್ಲಿ ಅಧಿಕಾರಕ್ಕಾಗಿ ಹೋರಾಟ ಮಾಡಬೇಕಿದೆ. ದಲಿತರು ಉಪ ಮುಖ್ಯಮಂತ್ರಿಯಾಗಲು ಬಿಡುತ್ತಿಲ್ಲ ಎಂದು ತಮ್ಮದೇ ಪಕ್ಷದ ವಿರುದ್ಧ ನೇರವಾಗ್ದಾಳಿ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಅಪಸ್ವರ ಇರೋದು ನಿಜ. ಇಲ್ಲಿ ಅಧಿಕಾರಕ್ಕಾಗಿ ಹೋರಾಟ ಮಾಡಬೇಕಿದೆ. ದಲಿತರು ಉಪಮುಖ್ಯಮಂತ್ರಿ ಆಗಲು ಬಿಡುತ್ತಿಲ್ಲ. ಇಂತಹ ಸನ್ನಿವೇದಲ್ಲಿ ಸಮುದಾಯದವರು ಒಗ್ಗೂಡಬೇಕಿದೆ ಎಂದು ಪರಮೇಶ್ವರ್ ಹೇಳಿದರು.
ಯಾದವರ ಒತ್ತಾಯಕ್ಕೆ ಮಣಿಯದ ಸಿದ್ಧು
ಇದೇ ವೇಳೆ ಕೃಷ್ಣ ಜಯಂತಿಗೆ ಸರ್ಕಾರಿ ರಜೆ ನೀಡಬೇಕು ಎಂಬ ಯಾದವ ಸಮುದಾಯದ ಒತ್ತಾಯಕ್ಕೆ ಮಣಿಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಜೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಯಾದವರ ಸಮಾವೇಶದಲ್ಲಿ ಪಾಲ್ಗೊಂಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೃಷ್ಣಜಯಂತಿಗೆ ರಜೆ ನೀಡಲು ಸಾಧ್ಯವಿಲ್ಲ ಎಂದಿದ್ದು, ಸರ್ಕಾರದ ವತಿಯಿಂದಲೇ ಜಯಂತಿ ಆಚರಣೆ ಮಾಡಲಾಗುತ್ತದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


