ವಿದ್ಯಾರ್ಥಿನಿ ಮೇಲೆ ಹಿರಿಯ ವಿದ್ಯಾರ್ಥಿಗಳಿಂದಲೇ ಅತ್ಯಾಚಾರ
ಕೊಯಂಬತ್ತೂರು: ತಮಿಳುನಾಡಿನಲ್ಲಿ ಕಿರಿಯ ವಿದ್ಯಾರ್ಥಿನಿಯ ಮೇಲೆ ಹಿರಿಯ ವಿದ್ಯಾರ್ಥಿಗಳೇ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ.
ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿದ ಹಿರಿಯ ವಿದ್ಯಾರ್ಥಿಗಳನ್ನು ವಿದ್ಯಾರ್ಥಿನಿ ಓದುತ್ತಿರುವ ಅದೇ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಮತ್ತು ಇಬ್ಬರು ಸಹೋದರರು ಎಂದು ಗುರುತಿಸಲಾಗಿದೆ. ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಪರಿಚಯವಾದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಮನೆಗೆ ಕರೆಸಿಕೊಂಡ ದೂರ್ತ ಸಹೋದರರು ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ.
ಪ್ರಕರಣ ಸಂಬಂಧ ವಿದ್ಯಾರ್ಥಿನಿಯು ಕೊಯಂಬತ್ತೂರ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ವಿದ್ಯಾರ್ಥಿನಿಯನ್ನು ವೈದ್ಯಕೀಯ ತಪಾಸಣೆಗೊಳಪಡಿಸಿರುವ ಪೊಲೀಸರು ಅತ್ಯಾಚಾರ ನಡೆದಿರುವುದನ್ನು ಖಚಿತಪಡಿಸಿಕೊಂಡಿದ್ದಾರೆ. ಓರ್ವನನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಮತ್ತೋರ್ವ ನಾಪತ್ತೆಯಾಗಿದ್ದು ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

