ವಿಶೇಷ ಸ್ಥಾನಮಾನಕ್ಕೆ ಸಿಎಂ ನಿತೀಶ್ ಪ್ರತಿಭಟನೆ, ಬಿಹಾರ ಸಂಪೂರ್ಣ ಬಂದ್

ಪಾಟ್ನಾ: ಆರ್ಥಿಕವಾಗಿ ಹಿಂದುಳಿದಿರುವ ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾನುವಾರ ಬಂದ್ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಬಿಹಾರದಲ್ಲಿ ಜನ ಜೀವನ ಸಂಪೂರ್ಣವಾಗಿ ಸ್ಥಬ್ಧಗೊಂಡಿದೆ.
ಕೇಂದ್ರ ಸರ್ಕಾರ ಬಿಹಾರವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದು, ಆರ್ಥಿಕವಾಗಿ ಹಿಂದುಳಿದಿರುವ ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿ ನಿತೀಶ್ ಕುಮಾರ್, ಪಾಟ್ನಾದ ಮಹಾತ್ಮ ಗಾಂಧಿ ಮೈದಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಇಂದು ಬಿಹಾರ್ ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬಿಹಾರ ಸಂಪೂರ್ಣವಾಗಿ ಸ್ಥಬ್ದಗೊಂಡಿದೆ. ಜೆಡಿಯು ಕಾರ್ಯಕರ್ತರು ರಾಜ್ಯಾದ್ಯಂತ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ ಬಿಹಾರದಲ್ಲಿ ಸಾರ್ವಜನಿಕರು ಮನೆಗಳಿಂದ ಹೊರ ಬರದೆ ರಸ್ತೆಗಳು ಬಿಕೋ ಎನ್ನುತ್ತಿವೆ.
ಮತ್ತೊಂದೆಡೆ ಪ್ರಮುಖ ರೈಲ್ವೇ ನಿಲ್ದಾಣಗಳಲ್ಲಿ ಪ್ರತಿಭಟನಾಕಾರರು ರೈಲುಗಳನ್ನು ನಿಲ್ಲಿಸಿ ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ಹೀಗಾಗಿ ಪ್ರಯಾಣಿಕರು ಪಾಟ್ನಾ, ಗಯಾ, ಭಗಲ್ಪುರ್, ನಳಂದ ಮತ್ತು ದರ್ಭಾಂಗ ರೈಲ್ವೆ ನಿಲ್ದಾಣಗಳಲ್ಲಿ ಸಿಕ್ಕಿಕೊಂಡಿದ್ದಾರೆ. ಅಲ್ಲದೆ ರಾಜ್ಯದ ಪ್ರಮುಖ ಹೆದ್ದಾರಿಗಳಲ್ಲಿ ಪ್ರತಿಭಟನಾಕಾರರು ದಾಂಧಲೆ ನಡೆಸುತ್ತಿದ್ದು, ಬಸ್ ಲಾರಿಗಳನ್ನು ತಡೆದು ಪ್ರತಿಭಟನೆಯಲ್ಲಿ ತೊಡಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕೇಂದ್ರ ಸರ್ಕಾರವು ಉದ್ದೇಶಪೂರ್ವಕವಾಗಿ ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಲು ನಿರಾಕರಿಸಿದೆ. ಆದರೆ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಗೆ ಸೀಮಾಂಧ್ರದಿಂದ ತೀವ್ರ ವಿರೋಧ ವ್ಯಕ್ತವಾಗಿದ್ದರು ಆಂಧ್ರ ವಿಭಜನೆ ಮಾಡಿದೆ. ಹೀಗಾಗಿ ಕೇಂದ್ರ ಸರ್ಕಾರ ಬಿಹಾರಕ್ಕೆ ಮಲತಾಯಿ ಧೋರಣೆ ತೋರುತ್ತಿದೆ ಎಂದು ಆರೋಪಿಸಿ ನಿತೀಶ್ ಇಂದು ಬಿಹಾರ್ ಬಂದ್ಗೆ ಕರೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


