ಈಗಿನ ಸುದ್ದಿ

'ಎತ್ತಿನಹೊಳೆ' ಯೋಜನೆಗೆ ಸಿಎಂ ಶಂಕುಸ್ಥಾಪನೆ

'ಎತ್ತಿನಹೊಳೆ' ಯೋಜನೆಗೆ ಸಿಎಂ ಶಂಕುಸ್ಥಾಪನೆ
Published On :

ಚಿಕ್ಕಬಳ್ಳಾಪುರ: ತೀವ್ರ ವಿರೋಧದ ನಡುವೆ ಬಯಲುಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಮಹತ್ವಾಕಾಂಕ್ಷಿಯ ಎತ್ತಿನಹೊಳೆ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಶಂಕು ಸ್ಥಾಪನೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ರಾಜ್ಯದ ಜನತೆಗೆ ಕುಡಿಯುವ ನೀರು ಒದಗಿಸುವ ಉದ್ದೇಶ ರಾಜ್ಯ ಸರ್ಕಾರ ಹೊಂದಿದೆ. ಎತ್ತಿನಹೊಳೆ ಯೋಜನೆಗೆ ವೈಜ್ಞಾನಿಕ ಅಧ್ಯಾಯನದ ವರದಿ ಅನ್ವಯ ಚಾಲನೆ ನೀಡಲಾಗಿದೆ ಎಂದರು.

ಚಿಕ್ಕಬಳ್ಳಾಪುರ ನಗರದ ಹೊರವಲಯದ ಮೈದಾನದಲ್ಲಿ ಯೋಜನೆಗೆ ಇಂದು ಬೆಳಗ್ಗೆ 12. 10ರ ಸುಮಾರಿನಲ್ಲಿ ದ್ವೀಪ ಬೆಳಗುವುದರ ಮೂಲಕ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ರೋಷನ್ ಬೇಗ್, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ವೀರಪ್ಪ ಮೊಯ್ಲಿ, ಜಲಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್, ಸಣ್ಣ ಹಾಗೂ ಮಧ್ಯಮ ಉದ್ಯಮ ಸಚಿವ ಕೆ. ಎಚ್. ಮುನಿಯಪ್ಪ ಪಾಲ್ಗೊಂಡಿದ್ದರು.

ಬಯಲುಸೀಮೆ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಎತ್ತಿನಹೊಳೆ ಯೋಜನೆಗೆ ಅನುಮೋದನೆ ನೀಡಲಾಗಿತ್ತು. ಈ ಯೋಜನೆಯಿಂದಾಗಿ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಬೆಂಗಳೂರು ಗ್ರಾಮಾಂತರ ರಾಮನಗರ ಜಿಲ್ಲೆಗಳಿಗೆ 24 ಟಿಎಂಸಿ ನೀರು ಒದಗಿಸಬಹುದಾಗಿದೆ.

ಎತ್ತಿನಹೊಳೆ ಯೋಜನೆಗೆ ಚಾಲನೆ ವಿರೋಧಿಸಿ ಪ್ರತಿಭಟನೆ
ಒಂದೆಡೆ ಎತ್ತಿನಹೊಳೆ ಯೋಜನೆಗೆ ಚಾಲನೆ ನೀಡಿದರೆ, ಮತ್ತೊಂದೆಡೆ ಎತ್ತಿನಹೊಳೆ ಯೋಜನೆ ವಿರೋಧಿಸಿ ಮಂಗಳೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ವಿವಿದ ಸಂಘಟನೆಯ ಕಾರ್ಯಕರ್ತರು ರಸ್ತೆಗಿಳಿದು ಸಿಎಂ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿ ನೇತ್ರಾವತಿಯನ್ನು ಉಳಿಸಿಕೊಳ್ಳುವ ಹಿನ್ನೆಲೆಯಲ್ಲಿ ಎತ್ತಿನಹೊಳೆ ಯೋಜನೆಗೆ ಮಂಗಳೂರಿನಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಯೋಜನೆ ಶಂಕು ಸ್ಥಾಪನೆ ಖಂಡಿಸಿ ಮಂಗಳೂರಿನಾದ್ಯಂತ ಬಂದ್ಗೆ ಕರೆ ನೀಡಲಾಗಿದ್ದು, ಸೋಮವಾರ ಬೆಳಗ್ಗಿನಿಂದಲೇ ಬಂದ್ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ವಿಶೇಷವಾಗಿ ಸುರತ್ಕಲ್ನಲ್ಲಿ ಕಾಪೋರೇಟರ್ಗಳು, ಹಿಂದೂ ಜಾಗರಣ ವೇದಿಕೆ ಸದಸ್ಯರು ಹಾಗೂ ಸ್ಥಳೀಯರು ಭಾರೀ ದೊಡ್ಡ ಸಂಖ್ಯೆಯಲ್ಲಿ ಆಂದೋಲನದಲ್ಲಿ ಪಾಲ್ಗೊಂಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಪರಮಶಿವಯ್ಯ ವರದಿ ಜಾರಿಗೊಳಿಸಲು ಆಗ್ರಹಿಸಿ ಶಾಶ್ವತ ನೀರಾವರಿ ಹೋರಾಟ ಸಮಿತಿ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಿ, ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಪ್ರತಿಭಟನಾ ನಿರತ ಸುಮಾರು 500 ಮಂದಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.