ಈಗಿನ ಸುದ್ದಿ

ಅಂಬರೀಷ್ ಆರೋಗ್ಯ ಸ್ಥಿರವಾಗಿದೆ: ಡಾ. ಸತೀಶ್

ಅಂಬರೀಷ್ ಆರೋಗ್ಯ ಸ್ಥಿರವಾಗಿದೆ: ಡಾ. ಸತೀಶ್
Published On :

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪೂರದ ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಹಾಗೂ ವಸತಿ ಸಚಿವ ಅಂಬರೀಷ್ ಆರೋಗ್ಯ ಸ್ಥಿರವಾಗಿದೆ ಎಂದು ವಿಕ್ರಂ ಆಸ್ಪತ್ರೆಯ ವೈದ್ಯ ಡಾ. ಸತೀಶ್ ಅವರು ಸೋಮವಾರ ತಿಳಿಸಿದ್ದಾರೆ.

ಅಂಬರೀಷ್ ಅವರನ್ನು ಸಿಂಗಾಪೂರಕ್ಕೆ ಕರೆದೊಯ್ಯುವ ಸಂದರ್ಭದಲ್ಲಿ ತೆರಳಿದ್ದ ಡಾ. ಸತೀಶ್ ಅವರು ಬೆಂಗಳೂರಿಗೆ ಆಗಮಿಸಿದ್ದು, ಅಂಬರೀಷ್ ಆರೋಗ್ಯ ಸಂಬಂಧ ಇಂದು ಸುದ್ದಿಗಾರರಿಗೆ ಮಾಹಿತಿ ನೀಡದರು. ಈ ವೇಳೆ, ಅಂಬರೀಷ್ ಅವರು ಚನ್ನಾಗಿದ್ದಾರೆ, ಅವರ ಆರೋಗ್ಯ ಸ್ಥಿರವಾಗಿದೆ. ಅಂಬರೀಷ್ ಅವರಿಗೆ ಉಸಿರಾಟದ ತೊಂದರೆ ಇದೆ. ಹೀಗಾಗಿ ಅವರಿಗೆ ವೆಂಟಿಲೇಟರ್ ಮುಂದುವರೆಸಲಾಗುವುದು ಎಂದರು.

ಮೌಂಟ್ ಎಲಿಜಬೆತ್ ಆಸ್ಪತ್ರೆಯ ವೈದ್ಯ ಡಾ. ಆಂಗ್ ಅವರು ಅಂಬರೀಷ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಹೀಗಾಗಿ ಯಾರು ಭಯ ಪಡುವ ಅಗತ್ಯವಿಲ್ಲ. ಅಂಬರೀಷ್ ಅವರಿಗೆ ಉಸಿರಾಟ ತೊಂದರೆ ಇರುವುದರಿಂದ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಸಮಯ ತೊಗೆದುಕೊಳ್ಳುತ್ತದೆ ಎಂದರು.

ನಟ ರಜನಿಕಾಂತ್‌ರ ಸಲಹೆ ಮೇರೆಗೆ ಅಂಬರೀಷ್ ಅವರನ್ನು ನಗರದ ವಿಕ್ರಂ ಆಸ್ಪತ್ರೆಯಿಂದ ಸಿಂಗಾಪೂರ ಮೌಂಟ್ ಎಲಿಜಬೆತ್ ಆಸ್ಪತ್ರೆಗೆ ಕಳೆದ ವಾರ ಏರ್ ಆಂಬುಲೇನ್ಸ್‌ನಲ್ಲಿ ಸ್ಥಳಾಂತರಿಸಲಾಯಿತು. ಈ ವೇಳೆ ವಿಕ್ರಂ ಆಸ್ಪತ್ರೆಯ ಶ್ವಾಸಕೋಶ ತಜ್ಞ ಡಾ. ಸತೀಶ್ ಅವರು ತೆರಳಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.