ಜಿಯಾಖಾನ್ ಆತ್ಮಹತ್ಯೆ ಪ್ರಕರಣ: ತಾಯಿಯಿಂದಲೇ ಕುಟುಕು ಕಾರ್ಯಚರಣೆ

ಮುಂಬೈ: ಬಾಲಿವುಡ್ ನಟಿ ಜಿಯಾಖಾನ್ ಆತ್ಮಹತ್ಯೆ ಪ್ರಕರಣ ಸಂಬಂಧಿಸಿದಂತೆ ಜಿಹಾಖಾನ್ ತಾಯಿ ರಾಬಿಯಾ ಸ್ವತಃ ಕುಟುಕು ಕಾರ್ಯಾಚರಣೆ ಕೈಗೊಂಡಿದ್ದಾರೆ.
ಜಿಯಾಖಾನ್ ಆತ್ಮಹತ್ಯೆ ಮಾಡಿಕೊಂಡಿಲ್ಲ. ಅವಳನ್ನು ಹತ್ಯೆಗೈಯ್ಯಲಾಗಿದೆ ಎಂದು ತಾಯಿ ರಾಬಿಯಾ ಆರೋಪಿಸಿದ್ದು, ಪ್ರಕರಣದ ಪ್ರಮುಖ ಸಾಕ್ಷಿಯ ಸಂಭಾಷಣೆಯ ಧ್ವನಿ ಮುದ್ರಿಕೆಯನ್ನು ಸಂಗ್ರಹಿಸಲಾಗಿದೆ ಎಂದು ರಾಬಿಯಾ ಹೇಳಿದ್ದಾರೆ.
ಜಿಯಾಳನ್ನು ಹತ್ಯೆ ಮಾಡಲಾಗಿದೆ. ಇದು ಆತ್ಮಹತ್ಯೆಯಲ್ಲ. ಆದರಿಂದ ಪ್ರಕರಣದ ತನಿಖೆ ನಡೆಸಲು ವಿಶೇಷ ತಂಡೆ ರಚಿಸಿ ಎಂದು ರಾಬಿಯಾ ಬಾಂಬೆ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ.
ಪ್ರಮುಖ ಸಾಕ್ಷಿಯ ಸಂಭಾಷಣೆಯ ಧ್ವನಿ ಮುದ್ರಿಕೆಯನ್ನು ಸಂಗ್ರಹಿಸಲಾಗಿದೆ. ಪೊಲೀಸರು ನೀಡಿರುವ ದಾಖಲೆಗಳು ಹಾಗೂ ಈ ಧ್ವನಿ ಮುದ್ರಿಕೆ ವಿಭಿನ್ನವಾಗಿದೆ. ಕಳೆದ ನಾಲ್ಕು ತಿಂಗಳಿನಿಂದ ಸ್ವತಃ ನಾನೆ ಕುಟುಕು ಕಾರ್ಯಾಚರಣೆ ಕೈಗೊಂಡಿದ್ದು, ಅನೇಕ ಸಾಕ್ಷಿಗಳು ದೊರೆತಿವೆ. ಇವುಗಳ ಪ್ರಕಾರ ಜಿಯಾಖಾನ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಆಕೆಯನ್ನು ಕೊಲೆ ಮಾಡಿರುವುದಾಗಿ ಕಂಡು ಬಂದಿದೆ ಎಂದು ಅವರು ತಿಳಿಸಿದ್ದಾರೆ.
2013 ಜೂನ್ 3ರಂದು ಜಿಯಾ ಖಾನ್ ಆತ್ಮಹತ್ಯೆಗೆ ಶರಣಾಗಿದ್ದರು. ಈ ಸಂಬಂಧ ಆಕೆಯ ಬಾಯ್‌ಫ್ರೆಂಡ್ ಸೂರಜ್‌ನನ್ನು ಬಂಧಿಸಿದ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ತದ ನಂತರ ಹೈಕೋರ್ಟ್ ಸೂರಜ್‌ಗೆ ಜಾಮೀನು ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


