ಈಗಿನ ಸುದ್ದಿ

ಸುಬ್ರತೋ ರಾಯ್ ಮುಖಕ್ಕೆ ಕಪ್ಪು ಮಸಿ

ಸುಬ್ರತೋ ರಾಯ್ ಮುಖಕ್ಕೆ ಕಪ್ಪು ಮಸಿ
Published On :

ನವದೆಹಲಿ: ಸಹಾರಾ ಮುಖ್ಯಸ್ಥ ಸುಬ್ರತೋ ರಾಯ್ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಹಾಜರಾಗಲು ಬರುತ್ತಿದ್ದಾಗ ವ್ಯಕ್ತಿಯೊಬ್ಬರು ಸುಬ್ರತೋ ಅವರ ಮುಖಕ್ಕೆ ಕಪ್ಪು ಮಸಿ ಎರಚಿದ ಘಟನೆ ನಡೆದಿದೆ.

ಮಂಗಳವಾರ ಸುಬ್ರತೋ ನ್ಯಾಯಾಲಯಕ್ಕೆ ಹಾಜರಾಗಲು ಬರುತ್ತಿದ್ದಾಗ ಕೋರ್ಟ್ ಆವರಣದ ಹೊರಗೆ ವ್ಯಕ್ತಿಯೊಬ್ಬರು ರಾಯ್ ವಿರುದ್ಧ ಘೋಷಣೆ ಕೂಗಿ ಮುಖಕ್ಕೆ ಕಪ್ಪು ಮಸಿ ಎರಚಿದ್ದಾರೆ.

ಮಸಿ ಎರಚಿದ ವ್ಯಕ್ತಿಯನ್ನು ಗ್ವಾಲಿಯಾರ್ ಮೂಲದ  ಮನೋಜ್  ಶರ್ಮಾ ಎಂದು ಗುರುತಿಸಲಾಗಿದೆ.

ಸಹಾರಾ ಸಂಸ್ಥೆಯ ಹೂಡಿಕೆದಾರರ 20,000 ಕೋಟಿ ಮೌಲ್ಯದ ಷೇರುಗಳನ್ನು ಹಿಂದಿರುಗಿಸಲು ವಿಫಲರಾದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು. ಆದರೆ ನ್ಯಾಯಾಲಯದ ಮುಂದೆ ಅವರು ಹಾಜರಾಗಲು ವಿಫಲರಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿತ್ತು.

ಇಷ್ಟೆಲ್ಲಾ ಆದ ಮೇಲೆ ರಾಯ್ ಅವರು ಶುಕ್ರವಾರ ಲಕ್ನೋದಲ್ಲಿ ಪೊಲೀಸರಿಗೆ ಶರಣಾಗಿದ್ದು, ಇಂದು ಅಪರಾಹ್ನ 2 ಗಂಟೆಗೆ ಕೋರ್ಟ್‌ಗೆ ಹಾಜರಾಗಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.