ಈಗಿನ ಸುದ್ದಿ

ಆಪ್-ಬಿಜೆಪಿ ಘರ್ಷಣೆ; ಆಪ್ ಕಾರ್ಯಕರ್ತರ ಬಂಧನ

ಆಪ್-ಬಿಜೆಪಿ ಘರ್ಷಣೆ; ಆಪ್ ಕಾರ್ಯಕರ್ತರ ಬಂಧನ
Published On :

ನವದೆಹಲಿ: ಬುಧವಾರ ಬಿಜೆಪಿ ಪ್ರಧಾನ ಕಾರ್ಯಾಲಯದ ಹೊರಗೆ ಆಮ್ ಆದ್ಮಿ ಪಕ್ಷದ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಆಪ್ ನಾಯಕರಾದ ಅಶತೋಷ್, ಶಾಜಿಯಾ ಇಲ್ಮೀ ಅವರ ಬಂಧನಕ್ಕೆ ಆದೇಶಿಸಿದ್ದಾರೆ. ನಿನ್ನೆ ನಡೆದ ಈ ಘಟನೆಯಲ್ಲಿ ಕನಿಷ್ಟ 14 ಆಪ್ ಕಾರ್ಯಕರ್ತರನ್ನು ಈವರೆಗೆ ಬಂಧಿಸಲಾಗಿದೆ.

ಆದಾಗ್ಯೂ, ನಿನ್ನೆ ನಡೆದ ಅಹಿತಕರ ಘಟನೆಗೆ ಕ್ಷಮೆಯಾಚಿಸಿದ ಆಪ್ ನೇತಾರ  ಅರವಿಂದ್ ಕೇಜ್ರಿವಾಲ್ ಕಾರ್ಯಕರ್ತರು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

ಬಿಜೆಪಿ ನೇತಾರರಾದ ಡಾ.ಹರ್ಷವರ್ಧನ್, ಮುಖ್ತಾರ್ ಅಬ್ಬಾಸ್ ನಖ್ವೀ ಮತ್ತು ನಳಿನ್ ಕೊಹ್ಲಿ ಮೊದಲಾದವರು ಚುನಾವಣಾ ಆಯೋಗಕ್ಕೆ ಭೇಟಿ ನೀಡಿ ಆಪ್ ವಿರುದ್ಧ ದೂರು ನೀಡಿದ್ದಾರೆ.

ಏತನ್ಮಧ್ಯೆ, ಆಪ್ ಕಾರ್ಯಕರ್ತರ ವಿರುದ್ಧ ಮಾತ್ರ ಎಫ್‌ಐಆರ್ ದಾಖಲಿಸಲಾಗುತ್ತಿದೆ. ದೆಹಲಿ ಪೊಲೀಸರು ಈ ರೀತಿ ಮಾಡಿರುವುದು ಸರಿಯಲ್ಲ. ನಾವು ಬಂಧನಕ್ಕೆ ಹೆದರುವುದಿಲ್ಲ. ಈವರೆಗೆ ಯಾವುದೇ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿಲ್ಲ. ನಮ್ಮ ಕಾರ್ಯಕರ್ತರು ತಾವೇ ಸ್ವತಃ ಗಾಯ ಮಾಡಿಕೊಂಡರೇ? ಎಂದು ಅಶತೋಷ್ ಪೊಲೀಸರ ವಿರುದ್ಧ ಕಿಡಿ ಕಾರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.