ರಾಜೀವ್ ಹಂತಕರ ಬಿಡುಗಡೆ: ಮಾಚ್ 26ಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಬಿಡುಗಡೆ ವಿರೋಧಿಸಿ 1991ರ ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರ ಮಾರ್ಚ್ 26ಕ್ಕೆ ಮುಂದೂಡಿದೆ.
ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಏಳು ಹಂತಕರ ಬಿಡುಗಡೆಗೆ ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ನೇತೃತ್ವದ ಸರ್ಕಾರ ನಿರ್ಧರಿಸಿತ್ತು. ತಮಿಳುನಾತಡು ಸರ್ಕಾರದ ನಿರ್ಧಾರ ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ಹಂತಕರ ಬಿಡುಗಡೆಗೆ ತಡೆಯಾಜ್ಞೆ ನೀಡಿತ್ತು.
1991ರ ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರು ತಮಿಳುನಾಡು ಸರ್ಕಾರದ ಅಧಿಕಾರ ವ್ಯಾಪ್ತಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಸಂವಿಧಾನದ ಪ್ರಕಾರ ಜೀವಾವಧಿ ಶಿಕ್ಷೆಗೆ ಗುರಿಯಾದವರನ್ನು ಬಿಡುಗಡೆಗೊಳಿಸುವ ಅಧಿಕಾರ 72 ಮತ್ತು 161 ಆರ್ಟಿಕಲ್ ಅಡಿ ರಾಜ್ಯಪಾಲರಿಗೆ ಹಾಗೂ ರಾಷ್ಟ್ರಪತಿಗಳಿಗೆ ಮಾತ್ರ ಇದೇ ಹೊರತು ಮುಖ್ಯಂತ್ರಿಗಳಿಗಲ್ಲ ಎಂದು ಹೇಳಿದ್ದಾರೆ. ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಾರ್ಚ್ 26ಕ್ಕೆ ಮುಂದೂಡಿದೆ.
ನಳಿನಿ ಶ್ರೀಹರನ್ ಸೇರಿದಂತೆ ಸಂತನ್, ಮುರಗನ್ ಮತ್ತು ಪೆರಾರಿವೇಲನ್ ಅವರ ಗಲ್ಲುಶಿಕ್ಷೆಯನ್ನು ಫೆ. 18 ರಂದು ಸುಪ್ರೀಂಕೋರ್ಟ್ ಜೀವಾವಧಿಗೆ ಇಳಿಸಿತ್ತು. ಇದಾದ ಮಾರನೇ ದಿನವೇ ತಮಿಳುನಾಡು ಸರ್ಕಾರ ರಾಜೀವ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಏಳೂ ಅಪರಾಧಿಗಳನ್ನು ಬಿಡುಗಡೆ ಮಾಡುವ ನಿರ್ಧಾರ ಕೈಗೊಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


