ಅಂಬಿ ಆರೋಗ್ಯದಲ್ಲಿ ಚೇತರಿಕೆ

ಸಿಂಗಾಪುರ: ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ನಟ ಹಾಗೂ ವಸತಿ ಸಚಿವ ಅಂಬರೀಷ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರಿಗೆ ಅಳವಡಿಸಲಾಗಿದ್ದ ವೆಂಟಿಲೇಟರ್ ಅನ್ನು ತೆಗೆಯಲಾಗಿದೆ.
ಅಂಬಿ ಆರೋಗ್ಯದ ಬಗ್ಗೆ ಮಾಧ್ಯಮಕ್ಕೆ ಮಾತನಾಡಿರುವ ಅವರ ಕುಟುಂಬ, ಅಂಬರೀಷ್ ಅವರು ಈಗ ಸಂಪೂರ್ಣ ಗುಣಮುಖರಾಗಿದ್ದು, ಶೀಘ್ರವೇ ಬೆಂಗಳೂರಿಗೆ ವಾಪಸ್ ಬರಲಿದ್ದಾರೆ ಎಂದು ತಿಳಿಸಿದ್ದಾರೆ.
ಅಂಬರೀಷ್ ಅವರು ಈಗ ಗುಣಮುಖರಾಗಿದ್ದು, ಅವರಿಗೆ ಅಳವಡಿಸಲಾಗಿದ್ದ ವೆಂಟಿಲೇಟರ್ ಅನ್ನು ತೆಗೆಯಲಾಗಿದೆ. ಈಗ ಅವರು ಸ್ವತಂತ್ರವಾಗಿ ಉಸಿರಾಡುತ್ತಿದ್ದಾರೆ ಎಂದು ಅಂಬರೀಷ್ ಅವರ ಅಕ್ಕನ ಮಗ, ಮೈಸೂರಿನ ಖ್ಯಾತ ವೈದ್ಯ ಡಾ. ಶೇಖರ್ ಅವರು ತಿಳಿಸಿದ್ದಾರೆ.
ಇನ್ನು ತಂದೆಯ ಆರೋಗ್ಯದ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಅಂಬಿ ಪುತ್ರ ಅಭಿಷೇಕ್ ಗೌಡ, ನಮ್ಮ ತಂದೆಯವರಿಗೆ ಈಗ ಯಾವುದೇ ಸಮಸ್ಯೆ ಇಲ್ಲ. ವೈದ್ಯರು ಅವರಿಗೆ ವಿಶ್ರಾಂತಿಗೆ ಸೂಚಿಸಿದ್ದಾರೆ. ಅವರ ದೇಹಕ್ಕೆ ವಿಶ್ರಾಂತಿಯ ಅಗತ್ಯೆ ಇದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


