ಈಗಿನ ಸುದ್ದಿ

ವೈದ್ಯರ ಮುಷ್ಕರ : ಮಾಧ್ಯಮದವರ ಮೇಲೆ ಹರಿಹಾಯ್ದ ಮುಲಾಯಂ

ವೈದ್ಯರ ಮುಷ್ಕರ : ಮಾಧ್ಯಮದವರ ಮೇಲೆ ಹರಿಹಾಯ್ದ ಮುಲಾಯಂ
Published On :

ಲಕ್ನೋ: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ವೈದ್ಯರ ಮುಷ್ಕರಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಶಾಸಕ ಇರ್ಫಾನ್ ಸೋಲಂಕಿ ಅವರ ವಿರುದ್ಧ ಕ್ರಮಕೈಗೊಳ್ಳಲು ಹಿಂದೇಟು ಹಾಕಿರುವುದರ ಬಗ್ಗೆ ಪ್ರಶ್ನಿಸಿದ ಮಾಧ್ಯಮದವರ ವಿರುದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಹರಿಹಾಯ್ದಿದ್ದಾರೆ.

ವೈದ್ಯರ ಮುಷ್ಕರದ ಬಗ್ಗೆ ಮಾಧ್ಯಮದವರು ಮುಲಾಯಂ ಅವರಲ್ಲಿ ಕೇಳಿದಾಗ, ನೀವ್ಯಾಕೆ ವೈದ್ಯರ ಮುಷ್ಕರಕ್ಕೆ ಇಷ್ಟು ಮಹತ್ವ ನೀಡುತ್ತಿದ್ದೀರಿ? ಎಂದು ಮರುಪ್ರಶ್ನೆ ಕೇಳಿದ್ದಾರೆ.

ಮಾರ್ಚ್ 1ರಂದು ಶುರುವಾಗಿರುವ ವೈದ್ಯರ ಮುಷ್ಕರದಿಂದಾಗಿ ಈವರೆಗೆ 50 ಮಂದಿ ಸಾವಿಗೀಡಾಗಿದ್ದಾರೆ ಎಂದು ಮಾಧ್ಯಮದವರು ಹೇಳಿದಾಗ, ಮುಲಾಯಂ ಅವರು ನಿಮ್ಮ ಕುಟುಂಬದವರು ಯಾರಾದರೂ ಸತ್ತಿದ್ದಾರೆಯೆ? ಎಂದು ಗುಡುಗಿದ್ದಾರೆ.

ಅದೇ ವೇಳೆ ನೀವು ವೈದ್ಯರ ಮುಷ್ಕರದ ಬಗ್ಗೆ ಪತ್ರಿಕೆಯಲ್ಲಿ ವರದಿ ಮಾಡುವುದನ್ನು ನಿಲ್ಲಿಸಿ, ಸಾವಿನ ಸಂಖ್ಯೆ ಕಡಿಮೆಯಾಗುತ್ತದೆ ಎಂದು ಮುಲಾಯಂ ಹೇಳಿದ್ದಾರೆ.

ಈ ನಡುವೆ ಸಮಾಜವಾದಿ ಪಕ್ಷದ ಶಾಸಕ ಇರ್ಫಾನ್ ಸೋಲಂಕಿ ಅವರ ಬಗ್ಗೆ ಮಾತನಾಡಲು ಮುಲಾಯಂ ನಿರಾಕರಿಸಿದ್ದಾರೆ.

ಅಲಹಾಬಾದ್ ಹೈಕೋರ್ಟ್ ವೈದ್ಯರು ಮುಷ್ಕರ ನಿಲ್ಲಿಸಿ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶಿಸಿರುವುದರಿಂದ ಉತ್ತರಪ್ರದೇಶದ ವೈದ್ಯರು ಗುರುವಾರ ಮುಷ್ಕರ ನಿಲ್ಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.