ಈಗಿನ ಸುದ್ದಿ

ಹೆಚ್ಚಿನ ಕಾನೂನು ಭದ್ರತೆಗಾಗಿ ಬಿಜೆಪಿ ಮನವಿ

ಹೆಚ್ಚಿನ ಕಾನೂನು ಭದ್ರತೆಗಾಗಿ ಬಿಜೆಪಿ ಮನವಿ
Published On :

ಬೆಂಗಳೂರು: ದೇವಸಂದ್ರ ವಾರ್ಡ್ ಪಾಲಿಕೆ ಸದಸ್ಯೆ ಮಂಜುಳಾದೇವಿ ಪತಿಯನ್ನು ಹಾಡ
ಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಕಾನೂನು ಭದ್ರತೆ ಒದಗಿಸಬೇಕೆಂದು ಆಗ್ರಹಿಸಿ ಬಿಜೆಪಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.

ಕಳೆದ 8 ತಿಂಗಳಿನಲ್ಲಿ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚಳವಾಗಿದೆ. ಬೆಂಗಳೂರು ಮಾತ್ರವಲ್ಲದೆ, ಹುಬ್ಬಳ್ಳಿ, ಶಿರಾ, ಚಿಕ್ಕಮಗಳೂರು, ಉಳ್ಳಾಲ ಸೇರಿದಂತೆ ಕರಾವಳಿ ಪ್ರದೇಶಗಳಲ್ಲೂ ಅಪರಾಧ ಸಂಖ್ಯೆ ಗಣನೀಯವಾಗಿ ಏರಿದೆ.

ಕರಾವಳಿ ಜಿಲ್ಲೆಗಳಲ್ಲಿ ಭೂಗತ ಪಾತಕಿಗಳ ಅಟ್ಟಹಾಸ ಜಾಸ್ತಿಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಆರ್. ಎನ್ ನಾಯಕ್ ಕೊಲೆಯಾಗಿರುವುದು ಇದಕ್ಕೆ ನಿದರ್ಶನ.

ಅದೇ ವೇಳೆ ಗುಲ್ಬರ್ಗಾದಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ಬೆಂಡೆಯವರ ಕಗ್ಗೊಲೆಯೂ ಭೂಗತ ಪಾತಕಿಗಳ ಅರ್ಭಟಕ್ಕೆ ಉದಾಹರಣೆಯಾಗಿದೆ.

ಅಂಕಿ ಅಂಶಗಳ ಪ್ರಕಾರ  ರಾಜ್ಯದಲ್ಲಿ ಒಟ್ಟು 1,350 ಕೊಲೆ, 5,560 ಗಲಭೆ ಮತ್ತು 824 ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಶಾಂತಿ ಕಾಪಾಡಲು ಹೆಚ್ಚಿನ ಭದ್ರತೆ ಮತ್ತು ಕಾನೂನು ವ್ಯವಸ್ಥೆಗಳನ್ನು ಕಲ್ಪಿಸಬೇಕು ಎಂದು ಬಿಜೆಪಿ ರಾಜ್ಯಪಾಲರಿಗೆ ಮನವಿ ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.