ಆರ್‌ಜೆಡಿಗೆ ರಾಮ್‌ಕೃಪಾಲ್ ಯಾದವ್ ಗುಡ್‌ಬೈ

ಪಾಟ್ನಾ: ಬಿಹಾರ ಮಾಜಿ ಮುಖ್ಯಮಂತ್ರಿ ಹಾಗೂ ಆರ್.ಜೆ.ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಈಗ ಮತ್ತೊಂದು ಹಿನ್ನೆಡೆಯಾಗಿದೆ. ಇತ್ತೀಚಿಗಷ್ಟೆ ಅವರ ವಿರುದ್ಧ ಬಂಡಾಯವೆದ್ದಿದ್ದ ಹಲವು ಶಾಸಕರು, ನಿತಿಶ್ ಕುಮಾರ್ ನೇತೃತ್ವದ ಜೆಡಿಯು ಸೇರ್ಪಡೆಗೆ ಮುಂದಾಗಿದ್ದರು. ಈಗ ಆರ್‌ಜೆಡಿ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ ರಾಮ್‌ಕೃಪಾಲ್ ಯಾದವ್ ಅವರು ಪಕ್ಷದ ಎಲ್ಲ ಸ್ಥಾನಗಳಿಗೂ ರಾಜಿನಾಮೆ ನೀಡಿದ್ದಾರೆ.
ಲೋಕಸಭೆ ಚುನಾವಣೆಗೆ ಪಾಟಲಿಪುತ್ರದಿಂದ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಶನಿವಾರ ಯಾದವ್ ಅವರು ಲಾಲು ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ. ಪಾಟಲಿಪುತ್ರ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರಿ ಮಿಸಾ ಭಾರತಿ ಅವರು ಆರ್‌ಜೆಡಿಯಿಂದ ಸ್ಪರ್ಧಿಸುತ್ತಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಲಾಲು ಘೋಷಿಸಿದ ಕೆಲವೇ ಕ್ಷಣಗಳಲ್ಲಿ ರಾಮ್‌ಕೃಪಾಲ್ ಯಾದವ್ ಅವರು ರಾಜಿನಾಮೆ ನೀಡಿದ್ದಾರೆ.
ನಾನು ಪಕ್ಷದ ಎಲ್ಲ ಹುದ್ದೆಗಳಿಗೂ ರಾಜಿನಾಮೆ ನೀಡಿದ್ದೇನೆ. ಆದರೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಇನ್ನು ರಾಜಿನಾಮೆ ನೀಡಿಲ್ಲ ಎಂದು ರಾಮ್‌ಕೃಪಾಲ್ ಯಾದವ್ ಅವರು ಸ್ಪಷ್ಟಪಡಿಸಿದ್ದಾರೆ. ರಾಜ್ಯಸಭಾ ಸದಸ್ಯರಾಗಿರುವ ರಾಮ್‌ಕೃಪಾಲ್ ಅವರು ಪಾಟಲಿಪುತ್ರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


