ಈಗಿನ ಸುದ್ದಿ

ಏಕದಿನ ರ್ಯಾಂಕಿಂಗ್: ನಂ.1 ಉಳಿಸಿಕೊಂಡ ಕೊಹ್ಲಿ

Published On :

ನವದೆಹಲಿ: ಅಂತಾರಾಷ್ಟ್ರೀಯ ಏಕದಿನ ಪಂದ್ಯದ ಬ್ಯಾಟ್ಸ್‌ಮೆನ್‌ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ನಂಬರ್ 1 ಸ್ಥಾನ ಉಳಿಸಿಕೊಂಡಿದ್ದಾರೆ. ಭಾನುವಾರ ಐಸಿಸಿ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಿದ್ದು, ಎಬಿ ಡಿ ವಿಲ್ಲರ್ಸ್ 2ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಮೂರು ಇನ್ನಿಂಗ್ಸ್‌ಗಳಲ್ಲಿ ಕೊಹ್ಲಿ ಸರಾಸರಿ 189 ರನ್ ಗಳಿಸಿದ್ದು 12 ಪಾಯಿಂಟ್ ಗಿಟ್ಟಿಸಿ ನಂಬರ್ 1 ಸ್ಥಾನಕ್ಕೇರಿದ್ದಾರೆ.

ಈ ಹಿಂದೆ 2014 ಜನವರಿಯಲ್ಲಿ ನ್ಯೂಜಿಲ್ಯಾಂಡ್ ವಿರುದ್ಧದ ಅಂತಾರಾಷ್ಟ್ರೀಯ ಏಕದಿನ ಸರಣಿ ಪಂದ್ಯವನ್ನಾಡುವ ಮುನ್ನವೂ ಕೊಹ್ಲಿ ನಂಬರ್ 1 ಸ್ಥಾನವನ್ನಲಂಕರಿಸಿದ್ದರು.

ಇನ್ನುಳಿದಂತೆ ರ್ಯಾಕಿಂಗ್ ಪಟ್ಟಿಯಲ್ಲಿ ಶಿಖರ್ ಧವನ್ (8ನೇ ಸ್ಥಾನ), ರೋಹಿತ್ ಶರ್ಮಾ (22ನೇ ಸ್ಥಾನ ) ಮತ್ತು ರವೀಂದ್ರ ಜಡೇಜಾ 50ನೇ ಸ್ಥಾನದಲ್ಲಿದ್ದಾರೆ.

ಬೌಲರ್‌ಗಳ ಪಟ್ಟಿಯಲ್ಲಿ  ಜಡೇಜಾ 5ನೇ ಸ್ಥಾನ ಹಾಗು ಅಶ್ವಿನ್ 14ನೇ ಸ್ಥಾನಗಳಿಸಿಕೊಂಡಿದ್ದಾರೆ. ಅದೇ ವೇಳೆ ಅಮಿತ್ ಮಿಶ್ರಾ 36ನೇ ಸ್ಥಾನದಲ್ಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.