ಈಗಿನ ಸುದ್ದಿ

ದ.ಕನ್ನಡ ಅಭ್ಯರ್ಥಿಯಾಗಿ ಜನಾರ್ದನ್ ಪೂಜಾರಿ ಆಯ್ಕೆ

ದ.ಕನ್ನಡ ಅಭ್ಯರ್ಥಿಯಾಗಿ ಜನಾರ್ದನ್ ಪೂಜಾರಿ ಆಯ್ಕೆ
Published On :

ಮಂಗಳೂರು: ಕಾಂಗ್ರೆಸ್ನ ಹಿರಿಯ ಮುಖಂಡ ಜನಾರ್ದನ್ ಪೂಜಾರಿ ಅವರು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ನ ಅಧಿಕೃತ ಅಭ್ಯರ್ಥಿಯಾಗಿ ಭಾನುವಾರ ಆಯ್ಕೆಯಾಗಿದ್ದಾರೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದ್ದರಿಂದ ಈ ಕ್ಷೇತ್ರದಲ್ಲಿ ಆಂತರಿಕ ಚುನಾವಣೆ ನಡೆಸಲಾಗಿತ್ತು. ಇಂದು ನಡೆದ ಆಂತರಿಕ ಚುನಾವಣೆಯಲ್ಲಿ ಜನಾರ್ದನ್ ಪೂಜಾರಿ ಅವರು ಭರ್ಜರಿ ಜಯ ಗಳಿಸುವ ಮೂಲಕ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.

ಆಂತರಿಕ ಚುನಾವಣೆಯಲ್ಲಿ ಚಲಾವಣೆಗೊಂಡ 574 ಮತಗಳ ಪೈಕಿ 478 ಮತಗಳನ್ನು ಪೂಜಾರಿಯವರು ಪಡೆದಿದ್ದಾರೆ. ಪೂಜಾರಿ ವಿರುದ್ಧ ಸ್ಪರ್ಧಿಸಿದ್ದ ಕಣಚೂರು ಮೋನು ಅವರು ಕೇವಲ 62 ಮತಗಳನ್ನು ಪಡೆದು ಭಾರಿ ಮುಖಭಂಗ ಅನುಭವಿಸಿದ್ದಾರೆ. ಇನ್ನುಳಿದಂತೆ ಏಳು ಮತಗಳು ಅಸಿಂಧುಗೊಂಡಿವೆ.

ಗೆಲುವು ಸಾಧಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪೂಜಾರಿ, ಆಂತರಿಕ ಚುನಾವಣೆ ನಮ್ಮ ಕುಟುಂಬದ ಚುನಾವಣೆಯಿದ್ದಂತೆ. ಇಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಕರಾವಳಿಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಗೆಲ್ಲಿಸಬೇಕಾಗಿರುವುದರಿಂದ ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.