ಈಗಿನ ಸುದ್ದಿ

ತುಮಕೂರು ಮಾಜಿ ಸಂಸದ ಎಸ್.ಮಲ್ಲಿಕಾರ್ಜುನಯ್ಯ ನಿಧನ

ತುಮಕೂರು ಮಾಜಿ ಸಂಸದ ಎಸ್.ಮಲ್ಲಿಕಾರ್ಜುನಯ್ಯ ನಿಧನ
Published On :

ತುಮಕೂರು: ಅನಾರೋಗ್ಯಕ್ಕೀಡಾಗಿದ್ದ ಬಿಜೆಪಿ ನಾಯಕ ಮತ್ತು ಮಾಜಿ ಸಂಸದ ಎಸ್.ಮಲ್ಲಿಕಾರ್ಜುನಯ್ಯ ಅವರು ಗುರುವಾರ ನಿಧನರಾಗಿದ್ದಾರೆ.

82 ವರ್ಷದ ಮಲ್ಲಿಕಾರ್ಜನಯ್ಯ ಅವರನ್ನು ನಗರದ ಬನ್ನೇರುಘಟ್ಟ ರಸ್ತೆಯ ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರು ಶಸ್ತ್ರ ಚಿಕಿತ್ಸೆಗೆ ಒಳಪಟ್ಟಿದ್ದರು ಎಂದು ಮೂಲಗಳು ತಿಳಿಸಿದ್ದವು.

ಆದರೆ ತೀವ್ರ ಅನಾರೋಗ್ಯದ ಹಿನ್ನಲೆಯಿಂದ ಇಂದು ಅವರು ನಿಧನರಾಗಿದ್ದಾರೆ.

1991ರಿಂದ 1996ರವರೆಗೆ ಲೋಕಸಭೆಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ತುಮಕೂರು ಲೋಕಸಭಾ ಕ್ಷೇತ್ರದಿಂದ  ಮೂರು ಬಾರಿ ಆಯ್ಕೆಯಾದ ಮಲ್ಲಿಕಾರ್ಜುನಯ್ಯ ಅವರು ಭಾರತೀಯ ಜನಸಂಘದ ರಾಜ್ಯಾಧ್ಯರಾಗಿಯೂ ಸೇವೆ ಸಲ್ಲಿಸಿದ್ದರು. ವಿಧಾನಪರಿಷತ್ತಿನ ಉಪಸಭಾಪತಿಯಾಗಿ ಸೇವೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.